HomeKarnataka Newsಕೋಟ್ಯಂತರ ರೂ. ವೆಚ್ಚದ MRI ಸೆಂಟರ್ ಬಳಕೆಗೆ ಬಾರದ ಸ್ಥಿತಿ: ಹಾವೇರಿ ಬಡರೋಗಿಗಳ ಪರದಾಟ

ಕೋಟ್ಯಂತರ ರೂ. ವೆಚ್ಚದ MRI ಸೆಂಟರ್ ಬಳಕೆಗೆ ಬಾರದ ಸ್ಥಿತಿ: ಹಾವೇರಿ ಬಡರೋಗಿಗಳ ಪರದಾಟ

For Dai;y Updates Join Our whatsapp Group

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್ ಸ್ಥಾಪಿಸಿ ತಿಂಗಳು ಕಳೆದರೂ, ಇನ್ನೂ ಸೇವೆ ಆರಂಭವಾಗದಿರುವುದು ರೋಗಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿದಿನ ಜಿಲ್ಲಾಸ್ಪತ್ರೆಗೆ ನೂರಾರು ಬಡರೋಗಿಗಳು ಚಿಕಿತ್ಸೆಗೆ ಬರುತ್ತಿದ್ದು, ಎಂಆರ್‌ಐ ಸ್ಕ್ಯಾನಿಂಗ್ ಅಗತ್ಯವಿರುವವರು ಮಾತ್ರ ದೂರದ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸೌಲಭ್ಯ ಇಲ್ಲದ ಕಾರಣ ರೋಗಿಗಳು ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಹಾಗೂ ಚಿತ್ರದುರ್ಗದ ಆಸ್ಪತ್ರೆಗಳಿಗೆ ತೆರಳಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಬಡರೋಗಿಗಳಿಗೆ ಪ್ರಯಾಣದ ಖರ್ಚಿನ ಜೊತೆಗೆ ಸಮಯವೂ ವ್ಯರ್ಥವಾಗುತ್ತಿದೆ.

ಕೆಲವರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದು, ಎಂಆರ್‌ಐ ಸ್ಕ್ಯಾನಿಂಗ್‌ಗೆ ಸುಮಾರು 12 ಸಾವಿರದಿಂದ 15 ಸಾವಿರ ರೂಪಾಯಿವರೆಗೆ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.

ಹಾವೇರಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 29 ವರ್ಷ ಕಳೆದಿದ್ದರೂ, ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸೌಲಭ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಳೆದ ನಾಲ್ಕು ತಿಂಗಳಿನಿಂದ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸೆಂಟರ್ ಸ್ಥಾಪಿಸುವ ಕಾಮಗಾರಿ ನಡೆದಿತ್ತು. ಕಾಮಗಾರಿ ಪೂರ್ಣಗೊಂಡು ಒಂದು ತಿಂಗಳು ಕಳೆದಿದ್ದರೂ, ಸೇವೆ ಮಾತ್ರ ಆರಂಭವಾಗಿಲ್ಲ ಎನ್ನಲಾಗಿದೆ.

ಈಗಾಗಲೇ ಇಬ್ಬರು ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ರೇಡಿಯಾಲಜಿಸ್ಟ್‌ರನ್ನು ನೇಮಕ ಮಾಡಿ ಶೀಘ್ರದಲ್ಲೇ ಎಂಆರ್‌ಐ ಸೆಂಟರ್ ಕಾರ್ಯಾರಂಭ ಮಾಡಬೇಕು. ಬಡರೋಗಿಗಳು ದೂರದ ಜಿಲ್ಲೆಗಳಿಗೆ ತೆರಳಿ ಸಾವಿರಾರು ರೂಪಾಯಿ ಖರ್ಚು ಮಾಡುವ ಪರಿಸ್ಥಿತಿಯನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಎಂಆರ್‌ಐ ಸೆಂಟರ್ ಅನ್ನು ಕೂಡಲೇ ಕಾರ್ಯಾರಂಭಗೊಳಿಸಿ ಬಡರೋಗಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಸಾರ್ವಜನಿಕರು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img