HomeGadag Newsಎಸ್‌ಸಿಪಿ/ಟಿಎಸ್‌ಪಿ ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆಗೆ ಡಿಸಿ ಶ್ರೀಧರ್ ಸೂಚನೆ

ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆಗೆ ಡಿಸಿ ಶ್ರೀಧರ್ ಸೂಚನೆ

For Dai;y Updates Join Our whatsapp Group

ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ

ಪ.ಜಾ./ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲೇ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (ಎಸ್‌ಸಿಪಿ/ಟಿಎಸ್‌ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ.ಜಾ./ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಾಗದಂತೆ ನಿಯಮಾನುಸಾರ ಪ್ರಕ್ರಿಯೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದಂತೆ ತ್ವರಿತವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಲ್ಯಾಪ್ಸ್ ಆಗದಂತೆ ಇಲಾಖಾ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್ ಮಾತನಾಡಿ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಸದ್ಬಳಕೆಯಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿಷ್ಕಾಳಜಿ ತೋರಬಾರದು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಅವರು ಸಭೆಗೆ ಆಗಮಿಸಿದ್ದವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿಯನ್ನು ಪರಿಶೀಲಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಅವಧಿಯಲ್ಲೇ ತಲುಪಬೇಕು. ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img