HomeKarnataka Newsಕೈದಿಯ ಪತ್ನಿಗೆ ವಿಡಿಯೋ ಕಾಲ್ ಮಾಡಿ ಬೆತ್ತಲಾಗುವಂತೆ ಒತ್ತಡ? ಡಿಐಜಿ ಸೋಮಶೇಖರ್ ವಿರುದ್ಧ ಗಂಭೀರ ಆರೋಪ

ಕೈದಿಯ ಪತ್ನಿಗೆ ವಿಡಿಯೋ ಕಾಲ್ ಮಾಡಿ ಬೆತ್ತಲಾಗುವಂತೆ ಒತ್ತಡ? ಡಿಐಜಿ ಸೋಮಶೇಖರ್ ವಿರುದ್ಧ ಗಂಭೀರ ಆರೋಪ

For Dai;y Updates Join Our whatsapp Group

ಬೆಂಗಳೂರು: ಸುಪ್ರೀಂ ಕೋರ್ಟ್‌ನ ಆದೇಶವನ್ನು ನಕಲು ಮಾಡಿ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಿದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮಾಜಿ ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಲಾಗಿದ್ದು, ಇದೀಗ ತನಿಖೆಯ ವೇಳೆ ಅವರ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿವೆ.

ಆರೋಪಗಳ ಪ್ರಕಾರ, ಪ್ರಕರಣದ ಮತ್ತೊಬ್ಬ ಆರೋಪಿ ಶ್ರೀಕಾಂತ್ ಹಾಗೂ ಮಾಜಿ ಡಿಐಜಿ ಸೋಮಶೇಖರ್, ಕೈದಿ ಎ. ಶಂಕರ್ ಅವರ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ನಕಲು ಮಾಡಿ ಶಂಕರ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವ ಆರೋಪವೂ ಇದೆ.

ತನಿಖೆಯ ಸಂದರ್ಭದಲ್ಲಿ ಶಂಕರ್ ಅವರ ಪತ್ನಿಗೆ ಮಾಜಿ ಡಿಐಜಿ ಸೋಮಶೇಖರ್ ವಿಡಿಯೋ ಕರೆ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಡಿಯೋ ಕರೆಯಲ್ಲಿ ಅಸಭ್ಯವಾಗಿ ವರ್ತಿಸುವಂತೆ ಹಾಗೂ ವಿವಸ್ತ್ರವಾಗುವಂತೆ ಒತ್ತಾಯಿಸಿದ್ದ ಆರೋಪವೂ ಕೇಳಿಬಂದಿದೆ.

ಪ್ರಕರಣದ ತನಿಖೆಯ ಭಾಗವಾಗಿ ಪರಪ್ಪನ ಅಗ್ರಹಾರ ಪೊಲೀಸರು ವಿಡಿಯೋವನ್ನು ವಶಕ್ಕೆ ಪಡೆದಿದ್ದು, ಅದರಲ್ಲಿರುವ ಅಂಶಗಳ ಕುರಿತು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ನಕಲು, ಕೈದಿ ಬಿಡುಗಡೆ ಹಾಗೂ ಇದೀಗ ಹೊರಬಂದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಆರೋಪಗಳ ಸತ್ಯಾಸತ್ಯತೆ ಮತ್ತಷ್ಟು ಸ್ಪಷ್ಟವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img