HomeKarnataka Newsವಿಪ್ ಉಲ್ಲಂಘನೆ ಆರೋಪ: ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಅನರ್ಹ

ವಿಪ್ ಉಲ್ಲಂಘನೆ ಆರೋಪ: ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಅನರ್ಹ

For Dai;y Updates Join Our whatsapp Group

ಬಳ್ಳಾರಿ: ಪಕ್ಷದ ಅಧಿಕೃತ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಾಗೂ ಪುರಸಭೆ ಸಭೆಗೆ ಉದ್ದೇಶಪೂರ್ವಕವಾಗಿ ಗೈರುಹಾಜರಾದ ಆರೋಪದಡಿ ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ವಿಜಯನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಹಗರಿಬೊಮ್ಮನಹಳ್ಳಿ ಪುರಸಭೆ ಸದಸ್ಯರಾದ ಈರಣ್ಣ, ಮಲ್ಲೇಶ್ವರಿ ಹಾಗೂ ಚನ್ನಮ್ಮ ಅವರು ಅನರ್ಹಗೊಂಡಿದ್ದಾರೆ.

ಕಳೆದ ಏಪ್ರಿಲ್‌ 30ರಂದು ಹಗರಿಬೊಮ್ಮನಹಳ್ಳಿ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದ 8ನೇ ವಾರ್ಡ್‌ ಸದಸ್ಯೆ ಕೆ. ರೇಷ್ಮಾ ಸಿಕಂದರ್‌ ಅವರು 13 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ 13ನೇ ವಾರ್ಡ್‌ ಸದಸ್ಯ ಬಣಕಾರ ಸುರೇಶ್‌ ಅವರು 9 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಅಧಿಕೃತ ವಿಪ್‌ ಹಾಗೂ ಪಕ್ಷದ ಸ್ಪಷ್ಟ ನಿರ್ದೇಶನಗಳನ್ನು ಉಲ್ಲಂಘಿಸಿ ಮೂವರು ಸದಸ್ಯರು ಅಡ್ಡ ಮತದಾನ ಮಾಡಿದ್ದಾರೆ ಹಾಗೂ ಚುನಾವಣಾ ಪ್ರಕ್ರಿಯೆಯಿಂದ ಉದ್ದೇಶಪೂರ್ವಕವಾಗಿ ದೂರ ಉಳಿದಿದ್ದಾರೆ ಎಂದು ಆರೋಪಿಸಲಾಗಿತ್ತು. ಪಕ್ಷದ ನಿಯಮಾವಳಿಗಳನ್ನು ಉಲ್ಲಂಘಿಸಿದ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರಡ್ಡಿ ಅವರು ಮೇ 15ರಂದು ವಿಜಯನಗರ ಜಿಲ್ಲಾಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಿದ ವಿಜಯನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯವು, ಕರ್ನಾಟಕ ಸ್ಥಳೀಯ ಸಂಸ್ಥೆಗಳ (ಪಕ್ಷಾಂತರ ನಿಷೇಧ) ಅಧಿನಿಯಮ, 1987ರ ನಿಯಮ 3ರ ಅನ್ವಯ ಅಧಿಕಾರ ಚಲಾಯಿಸಿ ಈರಣ್ಣ, ಮಲ್ಲೇಶ್ವರಿ ಹಾಗೂ ಚನ್ನಮ್ಮ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶಿಸಿದೆ. ಈ ಆದೇಶದೊಂದಿಗೆ ಹಗರಿಬೊಮ್ಮನಹಳ್ಳಿ ಪುರಸಭೆಯ ಅಧ್ಯಕ್ಷರ ಚುನಾವಣೆ ವೇಳೆ ಪಕ್ಷದ ವಿಪ್‌ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಂತಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img