HomeCrime Newsಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

For Dai;y Updates Join Our whatsapp Group

ಧಾರವಾಡ: ಸ್ವಿಫ್ಟ್ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ. ಮೃತರನ್ನು ಅಜೀತ್, ರಾಕೇಶ್, ಸಂದೀಪ್ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಜಯಪುರ ಜಿಲ್ಲೆಯವರು ಎಂದು ತಿಳಿದುಬಂದಿದೆ.

ಸ್ವಿಫ್ಟ್ ಕಾರು ಹುಬ್ಬಳ್ಳಿಯಿಂದ ವಿಜಯಪುರದತ್ತ ತೆರಳುತ್ತಿತ್ತು. ಈ ವೇಳೆ ಅಮರಗೋಳ ಗ್ರಾಮದ ಸಮೀಪ ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತದೇಹಗಳನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img