HomeBengaluru Newsದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿ ವಿಗ್ರಹ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿ ವಿಗ್ರಹ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

For Dai;y Updates Join Our whatsapp Group

ಬೆಂಗಳೂರು: ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿಗ್ರಹ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಕದ್ದ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ವಿಗ್ರಹಗಳು ಸೇರಿದಂತೆ ಒಟ್ಟು ನಾಲ್ಕು ವಿಗ್ರಹಗಳನ್ನು ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಇಷ್ಟೇ ಅಲ್ಲದೆ, ನಿರ್ಮಾಣ ಹಂತದ ಕಟ್ಟಡದಲ್ಲಿಯೂ ಯಂತ್ರೋಪಕರಣಗಳನ್ನು ಕಳ್ಳತನ ಮಾಡಿರುವ ಆರೋಪಿಗಳು, ಪೊಲೀಸರಿಗೆ ತಲೆನೋವಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ತಲಘಟ್ಟಪುರ ಪೊಲೀಸರು, ಕೊನೆಗೂ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕದ್ದ ವಿಗ್ರಹಗಳು ಹಾಗೂ ಕಳ್ಳತನಕ್ಕೆ ಸಂಬಂಧಿಸಿದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img