HomeKarnataka Newsರಸ್ತೆಯಲ್ಲೇ ರಾಜಾರೋಷವಾಗಿ ಓಡಾಡಿದ ಚಿರತೆ! ರಾಮನಗರದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ರಸ್ತೆಯಲ್ಲೇ ರಾಜಾರೋಷವಾಗಿ ಓಡಾಡಿದ ಚಿರತೆ! ರಾಮನಗರದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

For Dai;y Updates Join Our whatsapp Group

ರಾಮನಗರ: ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ರಸ್ತೆಯ ಮೇಲೆ ಚಿರತೆ ಮುಕ್ತವಾಗಿ ಓಡಾಡುತ್ತಿರುವುದನ್ನು ಕಂಡ ವಾಹನ ಸವಾರರು ಹಾಗೂ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಚಿರತೆಯ ಚಲನವಲನವನ್ನು ಕೆಲವರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು ದಕ್ಷಿಣ ಭಾಗದ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆ ಗ್ರಾಮದೊಳಗೆ ಪ್ರವೇಶಿಸಿ ಜನರು ಅಥವಾ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಚಿರತೆಯನ್ನು ಸೆರೆಹಿಡಿಯಲು ಸೂಕ್ತ ಸ್ಥಳದಲ್ಲಿ ಬೋನು ಅಳವಡಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹುಣಸನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img