HomePolitics Newsಸ್ಟಿಂಗ್ ಆಪರೇಷನ್ ಪ್ರಕರಣ ಸಿಬಿಐಗೆ ವಹಿಸಿ: ಬಸವರಾಜ ಹೊರಟ್ಟಿ ಆಗ್ರಹ!

ಸ್ಟಿಂಗ್ ಆಪರೇಷನ್ ಪ್ರಕರಣ ಸಿಬಿಐಗೆ ವಹಿಸಿ: ಬಸವರಾಜ ಹೊರಟ್ಟಿ ಆಗ್ರಹ!

For Dai;y Updates Join Our whatsapp Group

ಹುಬ್ಬಳ್ಳಿ: ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೂಡ ಸ್ಟಿಂಗ್ ಆಪರೇಷನ್‌ನಂತಹ ಘಟನೆಗಳು ನಡೆಯುತ್ತಿದ್ದವು. ಆದರೆ, ಅವು ಹೆಚ್ಚು ಬಹಿರಂಗವಾಗುತ್ತಿರಲಿಲ್ಲ. ಇದೀಗ ಇಂತಹ ಪ್ರಕರಣಗಳು ಬಹಿರಂಗವಾಗಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.

ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ನಾಟಕ ಐಟಿ-ಬಿಟಿ ಕ್ಷೇತ್ರದಲ್ಲಿ ದೇಶದಾದ್ಯಂತ ಹೆಸರು ಮಾಡಿತ್ತು. ಆದರೆ, ಈಗ ಸ್ಟಿಂಗ್ ಆಪರೇಷನ್ ಪ್ರಕರಣದಿಂದಾಗಿ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿರುವುದು ಬೇಸರದ ಸಂಗತಿ ಎಂದು ಅಭಿಪ್ರಾಯಪಟ್ಟರು.

ರಾಜಕೀಯದಲ್ಲಿ ತತ್ವ, ಆದರ್ಶಗಳು ಮರೆಯಾಗುತ್ತಿವೆ:

ಇಂದಿನ ರಾಜಕಾರಣದಲ್ಲಿ ಹಿಂದಿನಂತ ತತ್ವ ಮತ್ತು ಆದರ್ಶಗಳು ಉಳಿದಿಲ್ಲ ಎಂದು ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು. ಹಿಂದೆ ರಾಮಕೃಷ್ಣ ಹೆಗಡೆ ಅವರ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಾಗ ಅವರು ರಾಜೀನಾಮೆ ನೀಡಿದ್ದನ್ನು ಸ್ಮರಿಸಿದರು.

ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ ಅವರು, ಪ್ರಕರಣದ ಸತ್ಯಾಂಶ ಹೊರಬರಬೇಕಾದರೆ ಸಿಬಿಐ ತನಿಖೆ ಅಗತ್ಯ. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ನೆರವಿಗೆ ಧಾವಿಸಲು ಆಗ್ರಹ:

ಇದೇ ವೇಳೆ, ನೀರು ಮತ್ತು ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳಿಂದ ಕಂಗೆಟ್ಟಿರುವ ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಧಾವಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img