ಬೆಳಗಾವಿ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವಸತಿ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ ಪಟ್ಟಣದ ಹೊರವಲಯದಲ್ಲಿರುವ ರೈತರೊಬ್ಬರ ಜಮೀನಿನಲ್ಲಿರುವ ಕೃಷಿಹೊಂಡದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ರಜತ್ ಕಲ್ಲೊಳ್ಳಿ (17) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಬೈಲಹೊಂಗಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಬರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದನು.
ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಜತ್, ಗೆಳೆಯರೊಂದಿಗೆ ಈಜಲು ತೆರಳಿದ್ದಾಗ ಕೃಷಿ ಹೊಂಡದಲ್ಲಿ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



