HomeEducationಶಾಲಾ ದಾಖಲಾತಿ ಹೆಚ್ಚಿಸುವ ಪ್ರಯತ್ನವಾಗಲಿ : ಎಸ್.ವಿ. ಸಂಕನೂರ

ಶಾಲಾ ದಾಖಲಾತಿ ಹೆಚ್ಚಿಸುವ ಪ್ರಯತ್ನವಾಗಲಿ : ಎಸ್.ವಿ. ಸಂಕನೂರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ 1876ರಲ್ಲಿ ಪ್ರಾರಂಭಗೊಂಡು 148 ವರ್ಷಗಳ ಶೈಕ್ಷಣಿಕ ಇತಿಹಾಸ ದಾಖಲಿಸಿದ ಸರಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆಗೆ ಮಂಗಳವಾರ ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಅನಿರೀಕ್ಷಿತವಾಗಿ ಭೇಟಿ ನೀಡಿದರು.

ಈ ವೇಳೆ ಶಾಲೆಯ ಶೈಕ್ಷಣಿಕ ಸಾಧನೆ-ಸಾಧಕರ ಬಗ್ಗೆ ತಿಳಿಸಿದ ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ, ಕಳೆದ ವರ್ಷವೇ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಯತ್ನದಿಂದ 2 ಹೊಸ ಕೊಠಡಿಗಳ ನಿರ್ಮಾಣವಾಗಿದೆ.

ಶಾಲೆಗೆ 150 ವರ್ಷಗಳಾಗುತ್ತಾ ಬಂದಿದ್ದು, ಶಿಕ್ಷಕರು, ಪಾಲಕರು, ಪೋಷಕರು, ಶಿಕ್ಷಣ ಪ್ರೇಮಿಗಳು ಸಹಕಾರ ನೀಡುತ್ತಿದ್ದಾರೆ. ವರ್ಷಗಳ ಹಿಂದೆಯೇ ಬಿದ್ದಿರುವ ವರ್ಗ ಕೋಣೆಗಳನ್ನು ಪುನಃ ನಿರ್ಮಿಸಲು ಅನುದಾನ ಕಲ್ಪಿಸುವಂತೆ ಮನವಿ ಮಾಡಿದರು.

ಪ್ರೊ. ಎಸ್.ವಿ. ಸಂಕನೂರ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿ ವಿದ್ಯಾಮಂದಿರವಾಗಿರುವ ಈ ಶಾಲೆಯಲ್ಲಿ ಖಾಸಗಿ ಶಾಲೆಗಳ ಭರಾಟೆಯ ನಡುವೆಯೂ ಉತ್ತಮ ಶೈಕ್ಷಣಿಕ ವಾತಾವರಣ ಕಂಡು ಬರುತ್ತಿದೆ. ಇದೀಗ ಇಂಗ್ಲೀಷ್ ಭಾಷೆಯ ವ್ಯಾಮೋಹಕ್ಕೆ ಒಳಗಾಗಿರುವ ಪಾಲಕರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿದ್ದಾರೆ. ಇಂದಿನ ದಿನಮಾನಕ್ಕೆ ತಕ್ಕಂತೆ ಸರಕಾರಿ ಶಾಲೆಗಳಲ್ಲಿಯೂ ಕನ್ನಡವನ್ನು ಕಡೆಗಣಿಸದೇ ಇಂಗ್ಲೀಷ್ ಭಾಷೆಯನ್ನು ಕಲಿಸುವ ಕಾರ್ಯ ಮಾಡಬೇಕು.

ಸರಕಾರಿ ಶಾಲೆಗಳಲ್ಲಿಯೂ ಎಲ್ಲ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ, ನುರಿತ ಶಿಕ್ಷಕವೃಂದದ ಬಗ್ಗೆ ಜನರಲ್ಲಿ ಅರಿವು ಬರುವಂತೆ ಮಾಡಿ ಶಾಲಾ ದಾಖಲಾತಿ ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಚಂದ್ರು ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ನಾಯಕ್, ಶಿಕ್ಷಣ ಸಂಯೋಜಕ ಉಮೇಶ ಹುಚ್ಚಣ್ಣವರ, ಸಿಆರ್‌ಪಿಗಳಾದ ಉಮೇಶ ನೇಕಾರ, ಸತೀಸ ಬೋಮಲೆ, ಶಾಲಾ ಶಿಕ್ಷಕರು ಸೇರಿದಂತೆ ಅನೇಕರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img