ಶಿವಮೊಗ್ಗ:- ವಾಲಿಬಾಲ್ ತರಬೇತಿ ವೇಳೆ ಶಾಲೆ ಆವರಣದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವನ್ನಪ್ಪಿದ ಮನಕಲಕುವ ಘಟನೆ ಜಿಲ್ಲೆಯ ಸಾಗರದಲ್ಲಿ ಜರುಗಿದೆ.
46 ವರ್ಷದ ಗಜಾನನ ಹಿರೇಮಠ್ ಮೃತ ಶಿಕ್ಷಕ ಎಂದು ಗುರುತಿಸಲಾಗಿದೆ. ಸಾಗರ ಪಟ್ಟಣದ ಪ್ರೌಢಶಾಲೆಯ ಶಿಕ್ಷಕರಾಗಿರುವ ಗಜಾನನ ಹಿರೇಮಠ್ ಅವರು, ಇಂದು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು.
ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.



