ಹೊಸನಗರ: ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.
ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.
ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ. ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ.



