ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಡಿ-ಗ್ರೂಪ್ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಜಯ್ ಮದಕರಿ (37) ಎಂದು ಗುರುತಿಸಲಾಗಿದೆ. ತಾಯಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಆರೋಪಿ ತನ್ನ ನಿವಾಸಕ್ಕೆ ಕರೆದೊಯ್ದು ಮತ್ತು ಬರುವ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಹೊಸಪೇಟೆ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



