ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ.
ಕುನಾಲ್ ಕುಮಾರ್ (22) ಕೊಲೆಯಾದ ಯುವಕ. ಮೊಹಮ್ಮದ್ ನಸ್ರುಲ್ಲಾ(24) ಕೊಲೆ ಮಾಡಿದ ಸ್ನೇಹಿತ. ಘಟನೆಗೆ ಸಂಬಂಧಿಸಿದಂತೆ ಆವಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮೊಹಮ್ಮದ್ ನಸ್ರುಲ್ಲಾ, ಕುನಾಲ್ ಕುಮಾರ್ ಒಂದೇ ಕೊಠಡಿಯಲ್ಲಿ ವಾಸವಾಗಿದ್ದು, ಶೀತಕರಣ ಯಂತ್ರ ಸೇವಾ ಕೆಲಸ ಮಾಡುತ್ತಿದ್ದರು. ಈ ವೇಳೆ ನಸ್ರುಲ್ಲಾ ತಾಯಿಯ ಬಗ್ಗೆ ಕುನಾಲ್ ಅವಾಚ್ಯ ಪದ ಬಳಸಿ ನಿಂದಿಸಿದ್ದಾನೆ ಎನ್ನಲಾಗಿದೆ.
ಇದರಿಂದ ಆಕ್ರೋಶಗೊಂಡ ನಸ್ರುಲ್ಲಾ, ಕುನಾಲ್ ಕುಮಾರ್ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ. ಘಟನೆ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



