HomeDavanagereಬಸ್ - ಲಾರಿ ಮಧ್ಯೆ ಭೀಕರ ಅಪಘಾತ: 15ಕ್ಕೂ ಹೆಚ್ಚು ಹೋರಾಟಗಾರರಿಗೆ ಗಂಭೀರ ಗಾಯ

ಬಸ್ – ಲಾರಿ ಮಧ್ಯೆ ಭೀಕರ ಅಪಘಾತ: 15ಕ್ಕೂ ಹೆಚ್ಚು ಹೋರಾಟಗಾರರಿಗೆ ಗಂಭೀರ ಗಾಯ

For Dai;y Updates Join Our whatsapp Group

Spread the love

ದಾವಣಗೆರೆ: ವಿವಿಧ ಬೇಡಿಕೆಗಳಿಗ ಆಗ್ರಹಿಸಿ ಪ್ರತಿಭಟನೆ ನಡೆಸಲು ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಚಾಲಕ ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಈ ಅಪಘಾತ  ಸಂಭವಿಸಿದೆ.

ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್​ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದ ಬಸ್​ ಅಪಘಾತವಾಗಿದೆ.

ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!