HomeAgricultureರಿಯಾಯಿತಿ ದರದ ಬೀಜ ವಿತರಣೆಗೆ ಕ್ರಮ

ರಿಯಾಯಿತಿ ದರದ ಬೀಜ ವಿತರಣೆಗೆ ಕ್ರಮ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶಿರಹಟ್ಟಿ ಮತಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ ತಾಲೂಕು ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಸೋಮವಾರದಿಂದ ವಿತರಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವರ್ಷದ ಬರಗಾಲದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದ ಬಿತ್ತನೆ ಬೀಜಗಳು ಸಕಾಲದಲ್ಲಿ ವಿತರಣೆಯಾಗಬೇಕು. ಈಗಾಗಲೇ ಅನೇಕ ಕಡೆ ಕೃಷಿ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ಮಳೆಯಾಗಿದೆ. ಸೋಮವಾರದೊಳಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು, ಶೇಂಗಾ, ಜೋಳ, ತೊಗರಿ, ಗೋವಿನಜೋಳ ಬಿತ್ತನೆ ಬೀಜಗಳು ಹಾಗೂ ಗೊಬ್ಬರದ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳ ಬಗ್ಗೆ ತಿಳಿಸಿ ಬೀಜ ಖರೀದಿಸಲು ಬಂದ ರೈತರೊಂದಿಗೆ ಸಹಕಾರ-ಸೌಜನ್ಯದಿಂದ ವರ್ತಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸರ್ಕಾರ ಕೃಷಿ ಇಲಾಖೆಯಿಂದ ವಿತರಿಸುವ ಪ್ರಮಾಣೀಕೃತ, ಮಾನ್ಯತೆ ಪಡೆದ ಉತ್ತಮ ಗುಣಮಟ್ಟದ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ. ಒಂದು ವೇಳೆ ರೈತರು ಕಂಪನಿ ಬೀಜ ಖರೀದಿಸಿದರೂ ಪ್ರಮಾಣೀಕೃತ, ಗುಣಮಟ್ಟದ ಬಿತ್ತನೆ ಬೀಜಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಅದಕ್ಕೆ ಅಧಿಕೃತ ರಶೀದಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img