Homecinemaನಟಿ ಶೋಭಿತಾ ಸಾವು ಕೇಸ್: ಆತ್ಮಹತ್ಯೆಯೋ!? ಕೊಲೆಯೋ?; ಸತ್ಯ ಬಿಚ್ಚಿಟ್ಟ ವೈದ್ಯರು!

ನಟಿ ಶೋಭಿತಾ ಸಾವು ಕೇಸ್: ಆತ್ಮಹತ್ಯೆಯೋ!? ಕೊಲೆಯೋ?; ಸತ್ಯ ಬಿಚ್ಚಿಟ್ಟ ವೈದ್ಯರು!

For Dai;y Updates Join Our whatsapp Group

Spread the love

ಬ್ರಹ್ಮಗಂಟು ಧಾರವಾಹಿ ಮೂಲಕ ಜನಮನ್ನಣೆಗಳಿಸಿದ್ದ ಖ್ಯಾತ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿರೋದು ಎಲ್ಲರಿಗೂ ಶಾಕ್ ನೀಡಿದಂತಾಗಿದೆ. ಅಲ್ಲದೇ ಇವರ ಸಾವಿನ ಬಗ್ಗೆ ಹಲವರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದರು.

ಕಳೆದ 2 ವರ್ಷಗಳ ಹಿಂದೆ ಮದುವೆ ಆಗಿ ಹೈದರಾಬಾದ್ ನಲ್ಲಿ ಸೆಟಲ್ ಆಗಿದ್ದ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ. ಸಾವಿನ ಕಾರಣ ಬೇರೆ ಇರಬಹುದು ಎಂದು ನಟಿಯ ಆಪ್ತ ಬಳಗ ಅನುಮಾನ ವ್ಯಕ್ತಪಡಿಸಿತ್ತು.

ಇದೀಗ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವೈದ್ಯರು ಸಾವಿನ ಅಸಲಿ ವಿಷಯ ಬಿಚ್ಚಿಟ್ಟಿದ್ದಾರೆ. ಆತ್ಮಹತ್ಯೆಯಿಂದಲೇ ಶೋಭಿತಾ ನಿಧರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಶೋಭಿತಾ ಅವರು ಮದುವೆ ಆದ ಬಳಿಕ ಹೈದರಾಬಾದ್​ನಲ್ಲಿ ಪತಿಯ ಜೊತೆ ನೆಲೆಸಿದ್ದರು. ಅಪಾರ್ಟ್​ಮೆಂಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು.

ಯಾರಾದರೂ ನಟಿಯನ್ನು ಹತ್ಯೆ ಮಾಡಿರಬಹುದೇ ಎಂಬ ಪ್ರಶ್ನೆ ಕೂಡ ಉದ್ಭವ ಆಗಿತ್ತು. ಆದರೆ ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಾಣಿಸಿಲ್ಲ. ಹಾಗಾಗಿ ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂಬುದು ಖಚಿತವಾಗಿದೆ.

ಶೋಭಿತಾ ಸಾವಿನ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿದ್ದಾರೆ. ಶೋಭಿತಾ ಬರೆದಿದ್ದರು ಎನ್ನಲಾದ ಸೂಸೈಡ್​ ನೋಟ್​ ಕೂಡ ಲಭ್ಯವಾಗಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಇದರಲ್ಲಿ ಬರೆಯಲಾಗಿದೆ. ಅಲ್ಲದೇ, ‘ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ’ ಎಂದು ಸಹ ಬರೆಯಲಾಗಿದ್ದು, ಈ ಸಾಲುಗಳ ಅರ್ಥ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ನಟಿಯ ಆತ್ಮಹತ್ಯೆ ಸಂಬಂಧಿಸಿದಂತೆ ನೆರೆಹೊರೆಯವರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಶೋಭಿತಾ ಅವರ ಸಂಸಾರದಲ್ಲಿ ಏನಾದರೂ ಬಿರುಕು ಮೂಡಿತ್ತಾ ಎಂಬುದನ್ನು ಕೂಡ ಪತ್ತೆ ಹಚ್ಚಲಾಗುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!