ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಅಹಿಂದ ಸೈನಿಕರಾದ ಮುತ್ತಣ್ಣ ವಾಯ್.ಚವಡಣ್ಣವರ ಇವರನ್ನು ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಕಾರ್ಯಕಾರಿಣಿ ಸಮಿತಿಯ ಒಪ್ಪಿಗೆಯ ಮೇರೆಗೆ ಗದಗ ಜಿಲ್ಲಾ ಪ್ರಚಾರ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ ನೇಮಕಾತಿಯ ಆದೇಶ ಹೊರಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ. ಬೀರಲಿಂಗೇಶ್ವರ ಪೂಜಾರ, ರಾಜ್ಯ ಕಾನೂನು ಘಟಕದ ಅಧ್ಯಕ್ಷ ವಿಲಾಸ್ ವಾಯ್.ಕೊಪ್ಪಳ, ಗದಗ ಜಿಲ್ಲಾಧ್ಯಕ್ಷ ಸುರೇಶ್ ಬೀರಣ್ಣವರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಬಾಗಲಕೋಟೆ, ಜಿಲ್ಲಾ ಕಾರ್ಯಾಧ್ಯಕ್ಷೆ ಗಂಗಮ್ಮ ಚಕ್ರನವರ, ರಾಜ್ಯ ಘಟಕದ ಉಪಾಧ್ಯಕ್ಷೆ ರೇಖಾ ಜಡಿಯವರ್, ಗುರುನಗೌಡ ಪಾಟೀಲ್, ಬಿ ಶಿವಣ್ಣ, ಪರಮೇಶ್ವರಪ್ಪ ಕಾಳೆ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

