HomeIndia Newsವಿಮಾನ ದುರಂತ: ಮೃತ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಘೋಷಿಸಿದ ವೈದ್ಯ ಶಂಶೀರ್!

ವಿಮಾನ ದುರಂತ: ಮೃತ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಘೋಷಿಸಿದ ವೈದ್ಯ ಶಂಶೀರ್!

For Dai;y Updates Join Our whatsapp Group

Spread the love

ನವದೆಹಲಿ: ವಿಮಾನ ದುರಂತ ನಡೆದ ಒಂದೊಂದು ಫೋಟೋಗಳು ಭೀಕರತೆಗೆ ಸಾಕ್ಷ್ಯ ಹೇಳುತ್ತಿವೆ. ಕನಸುಗಳ ಮೂಟೆ ಹೊತ್ತು ಪ್ರಯಾಣ ಹೊರಟವರು ಘೋರ ಅಂತ್ಯದಲ್ಲಿ ಉಸಿರು ನಿಲ್ಲಿಸಿದ್ದಾರೆ. ಒಂದು ದುರಂತದಿಂದ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಬರೋಬ್ಬರಿ 274 ಜನರ ಜೀವ ತೆಗೆದ ದುರಂತ ಕಾರಣ ಏನು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದರ ನಡುವೆ ಅಪಘಾತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಘೋಷಣೆ ಮಾಡುವ ಮೂಲಕ ಭಾರತ ಮೂಲದ ಯುಎಇಯಲ್ಲಿರುವ ವೈದ್ಯ ಶಂಶೀರ್ ಉದಾರತೆ ಮೆರೆದಿದ್ದಾರೆಏರ್ಇಂಡಿಯಾ ವಿಮಾನ ಪತನಗೊಂಡು 270 ಮಂದಿ ಮೃತಪಟ್ಟಿದ್ದರು. ವಿಮಾನವು ವೈದ್ಯಕೀಯ ಕಾಲೇಜಿನ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಅದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರೂ ಇದ್ದರು. ಹಲವು ಮಂದಿ ಗಾಯಗೊಂಡಿದ್ದಾರೆ. ಕೇವಲ ಮೃತರ ಕುಟುಂಬಕ್ಕೆ ಮಾತ್ರವಲ್ಲ ಗಾಯಾಳುಗಳಿಗೂ ಸಹಾಯ ಮಾಡುವುದಾಗಿ ಘೋಷಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಐದು ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ಮತ್ತು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ವೈದ್ಯರ ಕುಟುಂಬಗಳಿಗೆ ತಲಾ 20 ಲಕ್ಷ ರೂ.ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಕ್ಷಣದ ನೆರವು ಸಿಗುವಂತೆ ನೋಡಿಕೊಳ್ಳಲು ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ ವೈದ್ಯರ ಸಂಘದ ಸಮನ್ವಯದ ಸಹಾಯದಿಂದ ಆರ್ಥಿಕ ಸಹಾಯವನ್ನು ವಿತರಿಸಲಾಗುವುದು ಎಂದು ಶಂಶೀರ್ ಅವರ ಹೇಳಿಕೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!