HomeEntertainmentಲೈಂಗಿಕ ಕಿರುಕುಳ ಆರೋಪ: ಖ್ಯಾತ ನಟ ಮುಖೇಶ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಲೈಂಗಿಕ ಕಿರುಕುಳ ಆರೋಪ: ಖ್ಯಾತ ನಟ ಮುಖೇಶ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

For Dai;y Updates Join Our whatsapp Group

Spread the love

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಸಿಪಿಎಂ ಶಾಸಕ ಎಂ. ಮುಖೇಶ್ ವಿರುದ್ಧ ನಟಿಯೊಬ್ಬರು ಲೈಂಗಿಕ ದೌಜ್ಯನ್ಯದ ದೂರು ದಾಖಲಿಸಿದ್ದು ಇದೀಗ ನಟನ ವಿರುದ್ಧ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮುಖೇಶ್ ವಿರುದ್ಧ ಡಿಜಿಟಲ್ ಸಾಕ್ಷ್ಯಗಳಿವೆ ಲಭ್ಯವಾಗಿದೆ ಎಂದು ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಸದಸ್ಯರನ್ನಾಗಿ ಮಾಡುವುದಾಗಿ ಭರವಸೆ ನೀಡುವ ನೆಪದಲ್ಲಿ ಮುಖೇಶ್ ಅವರು 2010 ರಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ನಟಿ ಮುಖೇಶ್ ವಿರುದ್ಧ ಕಳೆದ ಆಗಸ್ಟ್ ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಮುಕೇಶ್ ಮತ್ತು ನಟಿಯ ನಡುವಿನ ವಾಟ್ಸಾಪ್ ಚಾಟ್‌ಗಳು ಮತ್ತು ಇಮೇಲ್ ಸಂದೇಶಗಳನ್ನು ಸಾಕ್ಷ್ಯವಾಗಿ ಸಲ್ಲಿಸಲಾಗಿದೆ. ಸಾಂದರ್ಭಿಕ ಪುರಾವೆಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ಎಸ್‌ಐಟಿ ಹೇಳಿದೆ.  ಮುಕೇಶ್ ವಿರುದ್ಧ ಕಿರುಕುಳದ ಜೊತೆಗೆ ಲೈಂಗಿಕ ದೌರ್ಜನ್ಯದ ಆರೋಪವನ್ನೂ ಹೊರಿಸಲಾಗಿದೆ.

ಮಲೆಯಾಳಂ ಚಿತ್ರನಟ-ನಟಿಯರ ಸಂಘಟನೆ ಅಮ್ಮಾದ ಸದಸ್ಯತ್ವದ ಭರವಸೆ ನೀಡಿ ತನಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ನಟಿ ಮಿನು ಮುನೀರ್ ಆರೋಪಿಸಿದ್ದಾರೆ.

ಎಂ. ಮುಖೇಶ್ ಅವರ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯವು ತೀರ್ಪು ನೀಡುವವರೆಗೆ ಕೇರಳದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಮುಖೇಶ್ ಶಾಸಕರಾಗಿ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಮತ್ತು ನ್ಯಾಯಾಲಯವು ಪ್ರಕರಣದಲ್ಲಿ ತೀರ್ಪು ನೀಡಿದ ನಂತರವೇ ಅವರ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. “ಆರೋಪಪಟ್ಟಿ ಸಲ್ಲಿಸಲಾಗಿದ್ದು ಮತ್ತು ನ್ಯಾಯಾಲಯವು ಈ ಬಗ್ಗೆ ನಿಲುವು ತೆಗೆದುಕೊಂಡಾಗ ನಾವು ಈ ವಿಷಯವನ್ನು ತಿಳಿಸುತ್ತೇವೆ. ಅಲ್ಲಿವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ, ಏಕೆಂದರೆ ಇದು ಪಕ್ಷದ ನಿಲುವು.” ಎಂದು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಹೇಳಿದ್ದಾರೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!