HomeKarnataka Newsಟಿಪ್ಪು ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಕೆ ಆರೋಪ: ಆರೋಪಿಗಳ ಬಂಧನಕ್ಕೆ SP ವಿಶೇಷ...

ಟಿಪ್ಪು ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಕೆ ಆರೋಪ: ಆರೋಪಿಗಳ ಬಂಧನಕ್ಕೆ SP ವಿಶೇಷ ತಂಡ ರಚನೆ

For Dai;y Updates Join Our whatsapp Group

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ನ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಧನರಾಜ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೋಮು ಪ್ರಚೋದನೆ ಹಾಗೂ ಸಂಬಂಧಿತ ಆರೋಪಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸ್ಥಳೀಯ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಇನ್ನು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಸಂಬಂಧಿಸಿದ ಇನ್‌ಸ್ಟಾಗ್ರಾಮ್ ಖಾತೆದಾರರನ್ನು ಪತ್ತೆಹಚ್ಚಿ ಬಂಧಿಸಲು ವಿಶೇಷ ತಂಡವನ್ನು ರಚಿಸಿದ್ದಾರೆ. ವಿಡಿಯೋವನ್ನು ಯಾರು ಸೃಷ್ಟಿಸಿದ್ದಾರೆ, ಯಾರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಹಾಗೂ ಇದರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ, ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ಪೊಲೀಸರು ಸಹಿಸುವುದಿಲ್ಲ. ಶಾಂತಿ ಕದಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ವಿಷಯಗಳನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img