ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಸುಕ್ಷೇತ್ರ ನರಸೀಪುರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ವತಿಯಿಂದ 7ನೇ ಅಂಬಿಗರ ಶರಣ ಸಂಸ್ಕೃತಿ ಉತ್ಸವ-2025, ವಚನ ಗ್ರಂಥ ಮಹಾರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಬಿ.ಎನ್. ಯರನಾಳ ತಿಳಿಸಿದರು.
ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜ.14ರ ಬೆಳಿಗ್ಗೆ 6 ಗಂಟೆಗೆ ನಿಜಶರಣ ಅಂಬಿಗರ ತೊಟ್ಟಿಲೋತ್ಸವ ಕಾರ್ಯಕ್ರಮ, ಬೆಳಿಗ್ಗೆ 8ಕ್ಕೆ ಅಂಬಿಗರ ಚೌಡಯ್ಯನ ಐಕ್ಯಮಂಟಪ ಪೂಜೆ, 10 ಗಂಟೆಗೆ ಸಾಮೂಹಿಕ ರಕ್ತದಾನ ಶಿಬಿರ, 11ಕ್ಕೆ ಸಾಮೂಹಿಕ ಸರಳ ವಿವಾಹ ಮಹೋತ್ಸವ ಮತ್ತು ಲಿಂ. ಶಾಂತಮುನಿ ಮಹಾಸ್ವಾಮಿಗಳವರ 9ನೇ ಸ್ಮರಣೋತ್ಸವ, ಮಧ್ಯಾಹ್ನ 1.30ಕ್ಕೆ ರಾಜ್ಯಮಟ್ಟದ ವಚನ ಕಂಠಪಾಠ ಸ್ಪರ್ಧೆ, ಸಂಜೆ 7ಕ್ಕೆ ಪ್ರಪ್ರಥಮ ಐತಿಹಾಸಿಕ ಗಂಗಾರತಿ ಕಾರ್ಯಕ್ರಮ, ರಾತ್ರಿ 8ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ನಿಜಶರಣ ಅಂಬಿಗರ ಚೌಡಯ್ಯನವರ ಜೀವನಾಧಾರಿತ ದೃಶ್ಯಾವಳಿ ಪ್ರದರ್ಶನಗಳು ನಡೆಯಲಿವೆ ಎಂದರು.
ಜ. 15ರ ಬೆಳಿಗ್ಗೆ 8 ಗಂಟೆಗೆ ಧರ್ಮ ಧ್ವಜಾರೋಹಣ, 9.30ಕ್ಕೆ ಧರ್ಮಸಭೆ, 11ಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತ್ಯುತ್ಸವ, ಮಧ್ಯಾಹ್ನ 12 ಗಂಟೆಗೆ ಪೂಜ್ಯಶ್ರೀ ಶಾಂತಭೀಷ್ಮಚೌಡಯ್ಯ ಮಹಾಸ್ವಾಮಿಗಳವರ 9ನೇ ಪೀಠಾರೋಹಣ ವಾರ್ಷಿಕ ಮಹೋತ್ಸವ, ಸಂಜೆ 5 ಗಂಟೆಗೆ ವಚನ ಗ್ರಂಥ ಮಹಾರಥೋತ್ಸವ ಜರುಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಮಣ್ಣ ಇರಕಲ್ಲ, ಸಂಗಮೇಶ ಹಾದಿಮನಿ, ಗುರಪ್ಪ ತಿರ್ಲಾಪುರ, ಹರೀಶ ಬಾರಕೇರ, ಅಮಿತ ಪೂಜಾರ, ಚಂದ್ರಶೇಖರ ಅಂಬಿಗೇರ, ಅಶೋಕ ಶಿಗ್ಲಿ, ರವಿಕುಮಾರ ಗುಡಿಸಾಗರ, ಕಾಶಪ್ಪ ಬಳಗಾನೂರ, ಪ್ರವೀಣ ನೀಲಣ್ಣವರ, ಶಿವಾನಂದ ಬನಹಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಾಡಿನ ಪ್ರಮುಖ ಮಠಾಧೀಶರು, ಸಂತರು, ಶರಣರು, ಸಾಹಿತಿಗಳು, ರಾಜ್ಯದ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಕೇಂದ್ರದ ಮಂತ್ರಿಗಳು, ರಾಜ್ಯದ ಮಂತ್ರಿಗಳು, ಲೋಕಸಭಾ ಸದಸ್ಯರು, ಶಾಸಕರು, ಸಮಾಜದ ರಾಷ್ಟ್ರಮಟ್ಟದ, ರಾಜ್ಯ ಮಟ್ಟದ ನಾಯಕರು, ಸಮಾಜ ಬಾಂಧವರು ಹಾಗೂ ಭಕ್ತಾಧಿಗಳು ಭಾಗವಹಿಸುವರು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕೆಂದು ಬಿ.ಎನ್. ಯರನಾಳ ವಿನಂತಿಸಿದರು.



