HomeKarnataka Newsಸತೀಶ್ ಜಾರಕಿಹೊಳಿ ತವರು ಜಿಲ್ಲೆ ಬೆಳಗಾವಿಗೆ ಅಮಿತ್ ಶಾ ಎಂಟ್ರಿ! KLE ಆಸ್ಪತ್ರೆ ಉದ್ಘಾಟನೆ

ಸತೀಶ್ ಜಾರಕಿಹೊಳಿ ತವರು ಜಿಲ್ಲೆ ಬೆಳಗಾವಿಗೆ ಅಮಿತ್ ಶಾ ಎಂಟ್ರಿ! KLE ಆಸ್ಪತ್ರೆ ಉದ್ಘಾಟನೆ

For Dai;y Updates Join Our whatsapp Group

ಬೆಳಗಾವಿ/ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19ರಂದು ಕರ್ನಾಟಕಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ನಡೆದಿರುವ ಬೆನ್ನಲ್ಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಸೆಪ್ಟೆಂಬರ್ 18ರಂದು ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಗ್ಗೆ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಲ್‌ಇ ಸಂಸ್ಥೆಯ 1,500 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಹಾಗೂ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಸೆಪ್ಟೆಂಬರ್ 19ರ ಸಂಜೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಇಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ‘ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ’ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಇನ್ನು ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆಯಾದ ಬೆಳಗಾವಿಗೆ ಅಮಿತ್ ಶಾ ಭೇಟಿ ನೀಡುತ್ತಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಜೊಲ್ಲೆ ಕುಟುಂಬ ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಜಾರಕಿಹೊಳಿ ಸಹೋದರರ ಬೆಂಬಲದಿಂದಲೇ ಅಣ್ಣಾಸಾಹೇಬ್ ಜೊಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು ಎಂಬುದು ಗಮನಾರ್ಹ.

ಇದೀಗ ಸತೀಶ್ ಜಾರಕಿಹೊಳಿ ವಿರುದ್ಧದ ಇ.ಡಿ. ತನಿಖೆಯ ವಿಚಾರ ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಅಮಿತ್ ಶಾ ಚಿಕ್ಕೋಡಿಗೆ ಭೇಟಿ ನೀಡುತ್ತಿರುವುದು ಹಲವು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಆದರೆ, ಅವರ ಪ್ರವಾಸದ ಅಧಿಕೃತ ಕಾರ್ಯಕ್ರಮಗಳಲ್ಲಿ ಆಸ್ಪತ್ರೆ ಹಾಗೂ ಸಹಕಾರಿ ಸಂಸ್ಥೆ ಕಟ್ಟಡ ಉದ್ಘಾಟನೆ ಪ್ರಮುಖವಾಗಿ ನಿಗದಿಯಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img