ಬೆಳಗಾವಿ:- ಜಿಲ್ಲೆಯ ಸವದತ್ತಿ ಪಟ್ಟಣದ ಕೃಷಿ ಮಾರುಕಟ್ಟೆ ಮುಂದೆ ರೈತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ರೈತರು ಕಷ್ಟಪಟ್ಟು ಬೆಳೆದಂತ ಬೆಳೆದಿರುವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಮಾರುಕಟ್ಟೆಯಲ್ಲಿ ಅನ್ನದಾತರ ಕಷ್ಟಸುಖ ಯಾವುದೇ ಅಧಿಕಾರಿಗಳು ಕೇಳುತ್ತಿಲ್ಲ.
ಬೆಳೆದಿರುವ ಹೆಸರು ಕೊಯಿಲಿಗೆ ಬಂದಿತ್ತು ಆದರೆ ಮಳೆರಾಜ ಸುರಿದು ಕೈಗೆ ಬಂದು ತುತ್ತು ಬಾಯಿಗೆ ಬರಲಿಲ್ಲ, ಅಳದಿಳಿದು ಬಂದಿರುವ ಹೆಸರು ರಾಶಿ ಮಾಡಿಕೊಂಡು ನಮ್ಮ ಕೃಷಿ ಮಾರುಕಟ್ಟೆಗೆ ಬಂದರೆ ಇಲ್ಲಿ ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಬೆಳೆದಿರುವ ಬೆಳೆಗಳನ್ನು ಮಾರುಕಟ್ಟೆಯಲ್ಲಿ ಸೂಕ್ತವಾದ ಬೆಲೆ ಸಿಗುತ್ತಿಲ್ಲ, ದಲ್ಲಾಳಿಗಳು ಬೇಕಾದ ರೇಟು ಹಾಕಿ ಹೋಗುತ್ತಾರೆ ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ ಎಂದು ಅಧಿಕಾರಿಗಳಿಗೆ ತಿಳಿಸಿದರೆ, ಅವರು ಕೂಡಾ ನಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಿಲ್ಲ ಸರಕಾರ ರೈತರಿಗೆ ಅನ್ಯಾವಾಗದಂತೆ ಬೆಳೆದಿರುವ ಬೆಳೆಗೆ ಸೂಕ್ತ ಬೆಲೆಯನ್ನು ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.



