HomeKarnataka Newsಮೊಹಮ್ಮದ್ ನಲಪಾಡ್ʼ​ಗೆ ಮತ್ತೊಂದು ಸಂಕಷ್ಟ: SIT ಚಾರ್ಜ್​ ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್

ಮೊಹಮ್ಮದ್ ನಲಪಾಡ್ʼ​ಗೆ ಮತ್ತೊಂದು ಸಂಕಷ್ಟ: SIT ಚಾರ್ಜ್​ ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್

For Dai;y Updates Join Our whatsapp Group

Spread the love

ಬೆಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಚಾರ್ಜ್‌ಶೀಟ್ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ನಲಪಾಡ್ ಸೇರಿದಂತೆ ಶ್ರೀಕಿ ಮತ್ತು ರಾಬಿನ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಬಿಟ್‌ಕಾಯಿನ್ ನಗದೀಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಲಪಾಡ್ ಹಣ ಸ್ವೀಕರಿಸಿದ್ದು, ಅದಕ್ಕಾಗಿ ಕಮಿಷನ್ ಪಡೆದಿರುವ ಆರೋಪಗಳನ್ನು ಚಾರ್ಜ್‌ಶೀಟ್‌ನಲ್ಲಿ ದಾಖಲಿಸಲಾಗಿದೆ ಎನ್ನಲಾಗಿದೆ.

ಇದರ ನಡುವೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕೂಡ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದು, ಮೊಹಮ್ಮದ್ ನಲಪಾಡ್ ಅವರಿಗೆ ಮೂರನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದರೂ, ವಿವಿಧ ಕಾರಣಗಳನ್ನು ಉಲ್ಲೇಖಿಸಿ ನಲಪಾಡ್ ಇಡಿ ಮುಂದೆ ಹಾಜರಾಗಿರಲಿಲ್ಲ. ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ಕಾರಣದಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈಗ ಮೂರನೇ ಬಾರಿ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ, ನಲಪಾಡ್ ಇಡಿ ವಿಚಾರಣೆಗೆ ಹಾಜರಾಗುತ್ತಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ವೇಳೆ ಮತ್ತೊಮ್ಮೆ ಗೈರಾಗಿದ್ದರೆ ತನಿಖಾ ಸಂಸ್ಥೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!