HomeKarnataka Newsಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಆ.15ರವರೆಗೆ ಅವಕಾಶ; ಸರ್ಕಾರದಿಂದ ಅವಧಿ ವಿಸ್ತರಣೆ

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಆ.15ರವರೆಗೆ ಅವಕಾಶ; ಸರ್ಕಾರದಿಂದ ಅವಧಿ ವಿಸ್ತರಣೆ

For Dai;y Updates Join Our whatsapp Group

ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜೂನ್ 30ರಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರಕ್ಕೆ ತಿದ್ದುಪಡಿ ಮಾಡಿರುವ ಸರ್ಕಾರ, ಅರ್ಜಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಇದೀಗ ಆಗಸ್ಟ್ 15ರವರೆಗೆ ವಿಸ್ತರಿಸಿದೆ.

ಇದೇ ವೇಳೆ ಗ್ರಾಮೀಣ ಪ್ರದೇಶಗಳಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ ಸಲ್ಲಿಸುವ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿರ್ಧಾರದಿಂದ ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಆಧಾರಿತ ಚಟುವಟಿಕೆಗಳಲ್ಲಿ ತೊಡಗಿರುವ ಫಲಾನುಭವಿಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಲಭವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img