HomePolitics Newsಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ಅನುಮೋದನೆ: ವಿಜಯೇಂದ್ರ ಕಿಡಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ಅನುಮೋದನೆ: ವಿಜಯೇಂದ್ರ ಕಿಡಿ

For Dai;y Updates Join Our whatsapp Group

Spread the love

ಬೆಂಗಳೂರು:- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ X ಮಾಡಿರುವ ವಿಜಯೇಂದ್ರ, ಮುಂದಿನ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) EVM ಯಂತ್ರ ಬದಿಗಿಟ್ಟು ಮತ ಪತ್ರ (ಬ್ಯಾಲಟ್ ಪೇಪರ್) ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್‌ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣಿಕರಿಸಿಕೊಂಡಂತಿದೆ.

ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2೦23ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ.

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ, ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ.

ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾವಂತರಾದ ಕಾಂಗ್ರೆಸ್ಸಿಗರು ಚುನಾವಣೆಗಳ ನಿರಂತರ ಸೋಲುಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕಾರಣದಿಂದಾಗಿ ಆಧಾರ ರಹಿತ, ಅಪ್ರಬುದ್ಧ, ವಿತಂಡ ವಾದವನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು ಮತಗಳ್ಳತನದ ಹೆಸರಿನಲ್ಲಿ ಬಾಲಿಶ ವಿವಾದ ಹುಟ್ಟು ಹಾಕಲು ಹೊರಟಿದ್ದಾರೆ, ಇದನ್ನು ಬೆಂಬಲಿಸಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರವನ್ನು ಬಳಸಿ ಚುನಾವಣೆ ನಡೆಸುವುದಾಗಿ ನಿರ್ಣಯ ಕೈಗೊಂಡಿದೆ. ಇಡೀ ದೇಶ, ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಂತ್ರಜ್ಞಾನವನ್ನು ಅಪಮಾನಿಸಿ ಹೆಬ್ಬೆಟ್ಟಿನ ದಿನಗಳನ್ನು ನೆನಪಿಸಲು ಹೊರಟಿದೆ.

ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಬೆಂಬಲಿಸುತ್ತಿದೆ, ಅದನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮೊದಲ ಹೆಜ್ಜೆ ಇಡಲು ಹೊರಟಿದೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್‌ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!