HomeGadag Newsಸಲಹಾ ಸಮಿತಿ ಸದಸ್ಯರಾಗಿ ಡಾ. ಹಂಜೆ ನೇಮಕ

ಸಲಹಾ ಸಮಿತಿ ಸದಸ್ಯರಾಗಿ ಡಾ. ಹಂಜೆ ನೇಮಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಅಪ್ಪಣ್ಣ ಹಂಜೆ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರದ ತಜ್ಞರ ಸಲಹಾ ಸಮಿತಿಗೆ ಸದಸ್ಯರನ್ನಾಗಿ ಕುಲಪತಿಗಳು ಅನುಮೋದನೆ ಮಾಡಿದ್ದಾರೆ.

ಈ ಅಧಿಸೂಚನೆ ಹೊರಡಿಸಿದ ದಿನಾಂಕ 04-12-2024ರಿಂದ ಎರಡು ವರ್ಷಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಡಾ. ಅಪ್ಪಣ್ಣ ಹಂಜೆ ಅವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಂಶುಪಾಲರು, ಬೋಧಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಶ್ರೀಯುತರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ಅಧ್ಯಯನ ವಿಭಾಗದಲ್ಲಿ 2015-16ನೇ ಸಾಲಿನಿಂದ ಬಾಹ್ಯ ಮಾರ್ಗದರ್ಶಕರಾಗಿ ವಿಶ್ವವಿದ್ಯಾಯಲದಿಂದ ಮಾನ್ಯತೆ ಪಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಡಾ. ಹಾಮಾನಾ ಸಂಶೋಧನ ಕೇಂದ್ರದಲ್ಲಿ ಚರಿತ್ರೆ ವಿಷಯದಲ್ಲಿ ಪಿಎಚ್.ಡಿ. ಅಧ್ಯಯನಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!