HomeCrime Newsದೇವಾಯಗಳಿಗೆ ಸ್ಕೆಚ್ ಹಾಕಿ ಉಂಡೆನಾಮ ಹಾಕುತ್ತಿದ್ದ ಆಸಾಮಿಗಳು ಅರೆಸ್ಟ್

ದೇವಾಯಗಳಿಗೆ ಸ್ಕೆಚ್ ಹಾಕಿ ಉಂಡೆನಾಮ ಹಾಕುತ್ತಿದ್ದ ಆಸಾಮಿಗಳು ಅರೆಸ್ಟ್

For Dai;y Updates Join Our whatsapp Group

Spread the love

ಬೆಂಗಳೂರು:- ದೇವಾಯಗಳಿಗೆ ಸ್ಕೆಚ್ ಹಾಕಿ ಉಂಡೆನಾಮ ಹಾಕುತ್ತಿದ್ದ ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಇಬ್ಬರು ಬಂಧಿತರು. ಪ್ರವೀಣ್ ಭಟ್​​ ಬೆಳಗಿನ ಜಾವ ಉಡುಪಿ, ಶಿವಮೊಗ್ಗದ ಪ್ರತಿಷ್ಠಿತ ದೇವಾಲಯಗಳಲ್ಲಿ ಅರ್ಚಕನಾಗಿ ಪೂಜೆ ಮಾಡುತ್ತಿದ್ದ. ರಾತ್ರಿ ಆದರೆ ಸಾಕು ಅಲ್ಲಿದ್ದ ದೇವರ‌ ಸಾಮಾಗ್ರಿಗಳನ್ನ ಕಳ್ಳತನ ಮಾಡುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಸಂತೋಷ್​ನ ಸಹವಾಸದಿಂದ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳಿಗೂ ಕನ್ನ ಹಾಕಿ ಸದ್ಯ ಪೋಲಿಸರ ಅತಿಥಿಯಾಗಿದ್ದಾರೆ.

ಪ್ರವೀಣ್ ಭಟ್​ ಶಿವಮೊಗ್ಗ, ಉಡುಪಿಯಲ್ಲಿ ಅರ್ಚಕನಾಗಿದ್ದ. ಅಲ್ಲಿ ಹೋಮ, ಹವನ, ಪೂಜೆ ಮಾಡಿಕೊಂಡಿದ್ದ. ರಾತ್ರಿ ಅದೇ ದೇವಾಲಯದಲ್ಲಿ ದೇವರ ಬೆಳ್ಳಿ ಸಾಮಗ್ರಿಗಳು, ಹಿತ್ತಾಳೆ ವಸ್ತುಗಳು, ಚಿನ್ನಾಭರಣವನ್ನು ಕದ್ದು ಮಾರಾಟ ಮಾಡುತ್ತಿದ್ದ.

ಅರ್ಚಕನಾಗಿದ್ದರಿಂದ ಈ ವಸ್ತುಗಳನ್ನು ಕೊಂಡುಕೊಳ್ಳುವರು ಯಾವುದೇ ಅನುಮಾನ ಪಡುತ್ತಿರಲಿಲ್ಲ. ಮನೆಯಲ್ಲಿ ‌ಕಷ್ಟಯಿದೆ, ಅಲ್ಲದೆ ಮನೆಯ ತುಂಬಾ ಇಂತಹ ವಸ್ತುಗಳೇ ಇವೆ ಎಂದು ಹೇಳುತ್ತಿದ್ದ. ಆದರೆ ಅದೊಂದು ದಿನ ಮಾತ್ರ ಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದ. ಹೀಗೆ ಜೈಲು ಸೇರಿದ ಪ್ರವೀಣ್ ಭಟ್​​ಗೆ ಸಂತೋಷ್ ‌ಕೂಡ ಪರಿಚಯವಾಗಿದೆ. ಇಬ್ಬರು ಹೊರಗಡೆ ಬಂದು ಪಾರ್ಟ್ನರ್ಸ್ ಆಗಿದ್ದರು.

ಬನಶಂಕರಿ ದೇವಾಲಯದಲ್ಲಿ ಅರ್ಚಕನಾಗಿದ್ದಾಗ ಕೂಡ ಕಳ್ಳತನ ಮಾಡಿದ್ದ. ದೇವಾಲಯದ ಆಡಳಿತ ಮಂಡಳಿ ಪರಿಶೀಲನೆ ಮಾಡಿ, ಬಳಿಕ ಪೋಲಿಸರಿಗೆ ದೂರು ನೀಡಿದ್ದರು. ಬನ್ನೇರುಘಟ್ಟ ಸಮೀಪದ ಗೊಟ್ಟಿಗೇರೆ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಲಾಕ್ ಆಗಿದ್ದರು. ತನಿಖೆ ಮಾಡಿದಾಗ ದೇವಾಲಯಗಳಲ್ಲಿ ಕಳ್ಳತನ ‌ಮಾಡಿದ್ದು ಬಯಲಾಗಿತ್ತು.

ಇನ್ನೂ ಕದ್ದ ಸಾಮಾಗ್ರಿಗಳನ್ನು ಅಂಗಡಿಗೆ ಮಾರಾಟ ಮಾಡಿದರೆ, ಮತ್ತೊಮ್ಮೆ ಆ ಕಡೆ ಅಂಗಡಿಗೆ ಹೋಗುತ್ತಿರಲಿಲ್ಲ. ಪಕ್ಕಾ ಪ್ಲ್ಯಾನ್​ ಮಾಡಿಯೇ ಸ್ಕೆಚ್ ಹಾಕುತ್ತಿದ್ದರು. ಹೀಗೆ ಬಂಧಿತರಿಂದ 14 ಲಕ್ಷ ರೂ. ಮೌಲ್ಯದ ಸಾಮಾಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!