HomeGadag Newsಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶದ ಹಿನ್ನೆಲೆ: ಜ.17ರಂದು ಪೂರ್ವಭಾವಿ ಸಭೆ

ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶದ ಹಿನ್ನೆಲೆ: ಜ.17ರಂದು ಪೂರ್ವಭಾವಿ ಸಭೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯ ಸಿ.ಪಿ.ಎಡ್. ವೈದಾನದಲ್ಲಿ `ಗಾಂಧಿ ಭಾರತ’ ಸ್ಮರಣಾರ್ಥ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಅಭಿಯಾನ ಮುಂದುವರೆಸುವ ಸಲುವಾಗಿ ಜ. 21ರಂದು ಹಮ್ಮಿಕೊಂಡಿರುವ `ಬೃಹತ್ ಕಾಂಗ್ರೆಸ್ ಸಮಾವೇಶ’ದ ಅಂಗವಾಗಿ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಜ. 17ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆ ಜರುಗಲಿದೆ.

ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ, ಎಪಿಎಂಸಿ ಪಕ್ಷದ ಅಧ್ಯಕ್ಷರು-ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು-ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ.

ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಅವರ ನೇತೃತ್ವದ ಈ ಪೂರ್ವಭಾವಿ ಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ,

ಕೆಪಿಸಿಸಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಗದಗ ಜಿಲ್ಲಾ ಕೆಪಿಸಿಸಿ ವೀಕ್ಷಕರಾದ ಎಮ್.ಬಿ. ಸೌದಾಗಾರ, ಮೋಹನ್ ಅಸುಂಡಿ ಹಾಗೂ ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸಲು ಕಿತ್ತೂರ ಕರ್ನಾಟಕ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಡಾ. ಶ್ರೀನಿವಾಸ್ ಎನ್.ಟಿ., ಗದಗ ಜಿಲ್ಲೆಯ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಸೇರಿ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರು ಪಾಲ್ಗೊಳ್ಳುವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!