HomeKarnataka Newsಉಪಚುನಾವಣೆಯ ಮತದಾನದ ಬೆನ್ನಲ್ಲೇ ಚರಂಡಿಯಲ್ಲಿ ಬ್ಯಾಲೆಟ್ ಬಾಕ್ಸ್ʼಗಳು ಪತ್ತೆ.!

ಉಪಚುನಾವಣೆಯ ಮತದಾನದ ಬೆನ್ನಲ್ಲೇ ಚರಂಡಿಯಲ್ಲಿ ಬ್ಯಾಲೆಟ್ ಬಾಕ್ಸ್ʼಗಳು ಪತ್ತೆ.!

For Dai;y Updates Join Our whatsapp Group

Spread the love

ಹಾವೇರಿ: ಒಂದು ತಿಂಗಳಿನಿಂದ ಸದ್ದು ಮಾಡಿದ್ದ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್‌ ಅಖಾಡ ಸೈಲೆಂಟ್ ಆಗಿದೆ. ಇಷ್ಟು ದಿನ ನಾಯಕರ ಭಾಷಣ ಕೇಳಿದ್ದ ಮತದಾರ ಇಂದು ತನ್ನ ತೀರ್ಪು ಬರೆದಿದ್ದಾನೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಲಾಕ್ ಆಗಿದ್ದು, ಎಲ್ಲಾ ಕಡೆಯೂ ಸೋಲುಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಇದರ ಬೆನ್ನಲ್ಲೇ ಹಾವೇರಿ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿವೆ. ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.

ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್​ ಬಾಕ್ಸ್​ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ.

ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು. ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್​ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!