ಬಳ್ಳಾರಿ: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯೇ ದಿನವಾದ ಇಂದು ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಹಸೀಲ್ದಾರ್ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಶ್ರೀರಾಮುಲು ಮತ್ತಿತರ ನಾಯಕರ ಸಮ್ಮುಖದಲ್ಲಿ ಬಂಗಾರು ಹನುಮಂತು ತಮ್ಮ ಉಮೇದುವಾರಿ ಸಲ್ಲಿಸಿದರು.
ಇದಕ್ಕೂ ಮುನ್ನಾ ನಡೆದ ರೋಡ್ ಶೋ ನಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ವೈ. ವಿಜಯೇಂದ್ರ, ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿ. ಶ್ರೀರಾಮುಲು ಅವರನ್ನು ಸೋಲಿಸಲಾಗಿದೆ. ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಕರೆ ನೀಡಿದರು.



