HomeGadag Newsಬಸವ ಜಯಂತಿ ಪೂರ್ವಭಾವಿ ಸಭೆ ಇಂದು

ಬಸವ ಜಯಂತಿ ಪೂರ್ವಭಾವಿ ಸಭೆ ಇಂದು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಜ. ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಮೇ. 4ರ ಸಂಜೆ 6 ಗಂಟೆಗೆ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ಪೂರ್ವಭಾವಿ ಸಭೆ ಕರೆಯಲಾಗಿದೆ.

ಜಗದ್ಗುರು ತೋಂಟದಾರ್ಯ ಜಾತ್ರಾ ಸಮಿತಿ-24, ಲಿಂಗಾಯತ ಪ್ರಗತಿಶೀಲ ಸಂಘ, ಬಸವದಳ, ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭೆ, ದಲಿತ ಸಂಘರ್ಷ ಸಮಿತಿ, ಬಸವ ಯೊಗ ಕೇಂದ್ರ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ಶರಣರಾದ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಡಿವಾಳ ಮಾಚಯ್ಯ, ಅಂಬಿಗರ ಚೌಡಯ್ಯ, ಸಮಗಾರ ಹರಳಯ್ಯ, ನೂಲಿಯ ಚೆಂದಯ್ಯ, ಹಡಪದ ಅಪ್ಪಣ್ಣ, ಶಿವಯೋಗಿ ಸಿದ್ಧರಾಮೇಶ್ವರ, ಮೇದಾರ ಕೇತಯ್ಯ ಮುಂತಾದ ಬಸವಪರ ಸಂಘಟನೆಗಳ ಸದಸ್ಯರು ಭಾಗವಹಿಸಿ ಬಸವ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಎಸ್.ಕಳಸಾಪೂರಶೆಟ್ರು, ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!