HomeGadag Newsಎಪ್ರಿಲ್ 30ರಂದು ಬಸವ ಜಯಂತಿ ಮೆರವಣಿಗೆ

ಎಪ್ರಿಲ್ 30ರಂದು ಬಸವ ಜಯಂತಿ ಮೆರವಣಿಗೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಲಿಂಗಾಯತ ಧರ್ಮ ಸಂಸ್ಥಾಪಕ ಬಸವಣ್ಣನವರ 920ನೇ ಜಯಂತಿ ಅಂಗವಾಗಿ ಎಪ್ರಿಲ್ 30ರ ಮುಂಜಾನೆ 9 ಗಂಟೆಗೆ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರು ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯು ಶ್ರೀಮಠದಿಂದ ಪ್ರಾರಂಭವಾಗಿ ಮಹೇಂದ್ರಕರ ವೃತ್ತ, ಹುಯಿಲಗೋಳ ವೃತ್ತ, ಬಸವೇಶ್ವರ ವೃತ್ತ, ಕೆ.ಎಚ್. ಪಾಟೀಲ ವೃತ್ತ, ಮಾಳಶೆಟ್ಟಿ ವೃತ್ತ, ರೋಟರಿ ವೃತ್ತ, ಮಹಾತ್ಮ ಗಾಂಧಿ ವೃತ್ತದ ಮೂಲಕ ತೋಂಟದಾರ್ಯ ಮಠಕ್ಕೆ ತಲುಪುವುದು.

ನಂತರ ಗದಗ ಜಿಲ್ಲಾಡಳಿತದ ವತಿಯಿಂದ ಶ್ರೀಮಠ ಶಿವಾನುಭವ ಮಂಟಪದಲ್ಲಿ ಮುಂಜಾನೆ 11 ಗಂಟೆಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯಶ್ರೀ ಮ.ನಿ.ಪ್ರ. ಶಾಂತಲಿಂಗ ಮಹಾಸ್ವಾಮಿಗಳವರು ವಹಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ವಹಿಸುವರು. ಶರಣ ತತ್ವ ಚಿಂತಕ ಜಿ.ಎಸ್. ಪಾಟೀಲ ವಿಜಯಪುರ ಉಪನ್ಯಾಸ ನೀಡುವರು.

ಮೆರವಣಿಗೆಯಲ್ಲಿ ಬಸವದಳ-ಬಸವಕೇಂದ್ರ-ಲಿಂಗಾಯತ ಪ್ರಗತಿಶೀಲ ಸಂಘ, ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಸಮಿತಿ-2025, ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಸವ ಯೋಗ ಕೇಂದ್ರ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭೆ, ಶರಣರಾದ ಜೇಡರ ದಾಸಿಮಯ್ಯ, ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ನೂಲಿಯ ಚಂದಯ್ಯ, ಸಮಗಾರ ಹರಳಯ್ಯ, ಮಡಿವಾಳ ಮಾಚಯ್ಯ, ಅಂಬಿಗರ ಚೌಡಯ್ಯ, ಮೇದಾರ ಕೇತಯ್ಯ, ಹೂಗಾರ ಮಾದಯ್ಯ, ಶಿವಯೋಗಿ ಸಿದ್ಧರಾಮೇಶ್ವರ, ಹಡಪದ ಅಪ್ಪಣ್ಣ, ಕುಂಬಾರ ಗುಂಡಯ್ಯ, ಕುರುಬ ಗೊಲ್ಲಾಳೇಶ, ದಲಿತ ಸಂಘರ್ಷ ಸಮಿತಿ, ದಲಿತ ಕಲಾ ಬಳಗ ಹಾಗೂ ಬಸವಪರ ಸಂಘಟನೆಗಳ ಮುಖಂಡರು ಭಾಗವಹಿಸಬೇಕೆಂದು ಸಂಘಟಿಕರ ಪರವಾಗಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಜ.ತೋಂಟದಾರ್ಯ ಮಠದ ಜಾತ್ರಾ ಸಮಿತಿ-2025ರ ಅಧ್ಯಕ್ಷರಾದ ಡಾ. ಧನೇಶ ದೇಸಾಯಿ ಹಾಗೂ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!