ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಶ್ರೀ ಬಸವೇಶ್ವರ ಸಿಬಿಎಸ್‌ಸಿ ಪ್ರೌಢಶಾಲೆಯ ಸಿಬಿಎಸ್‌ಇ ಫಲಿತಾಂಶ ಶೇ. 99ರಷ್ಟಾಗಿದೆ ಎಂದು ಪ್ರಾಚಾರ್ಯ ಬಿ.ಎಚ್. ಬಂಡಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನುಷಾ ಹಿರೇಗೌಡ್ರ ಶೇ. 90.08 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಸ್ನೇಹಾ ಅರಹುಣಸಿ ಶೇ. 84.4 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ಅಭಿಷೇಕ ಚವಡಿ ಶೇ. 83.02 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಚೇರಮನ್ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಎನ್.ಆರ್. ಗೌಡರ ಅಭಿನಂದಿಸಿ ಶುಭ ಹಾರೈಸಿದ್ದಾರೆ.



