ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನಾಳೆಯೂ ಪವರ್ ಸಮಸ್ಯೆ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ರೆಮಕೊ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ 30ರ ಮಂಗಳವಾರ ನಗರದ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಮೈಸೂರ್ ರಸ್ತೆ 7ನೇ ಕ್ರಾಸ್, ಶಾಮಣ್ಣಾ ಗಾರ್ಡನ್, ಮಂಜುನಾಥನಗರ, ಪೈಪ್‌ಲೈನ್ ರಸ್ತೆ, ಸಂತೋಷ್ ಟೆಂಟ್ ಪ್ರದೇಶ, ಅನಂತ ರಾಮಯ್ಯ ಕಾಂಪೌಂಡ್, ಕುವೆಂಪು ನಗರ, 6ನೇ ಕ್ರಾಸ್ ಮೈಸೂರು ರಸ್ತೆ, 4ನೇ ಕ್ರಾಸ್ ಮೈಸೂರು ರಸ್ತೆ, ಗುಡ್ಡದಹಳ್ಳಿ ಹಾಗೂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿಕೊಂಡಿದೆ.



