ನವದೆಹಲಿ: 2026ರ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿ ಜನವರಿ 9ರಿಂದ ಫೆಬ್ರವರಿ 5ರವರೆಗೆ ನಡೆಯಲಿದ್ದು, ಆರ್ ಸಿಬಿ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ.
ಎಸ್, ಈ ಟೂರ್ನಿಯಿಂದ ಆರ್‌ಸಿಬಿಯ ಎಲ್ಲಿಸ್ ಪೆರ್ರಿ, ಯುಪಿ ವಾರಿಯರ್ಸ್‌ನ ತಾರಾ ನರ್ರಿಸ್ ಹಾಗೂ ದೆಹಲಿ ಕ್ಯಾಪಿಟಲ್ಸ್‌ನ ಅನ್ನಾಬೆಲ್ ಸದರ್ಲ್ಯಾಂಡ್ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್‌ಗಳಾದ ಪೆರ್ರಿ ಮತ್ತು ಸದರ್ಲ್ಯಾಂಡ್ ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದು, ಪೆರ್ರಿ ಬದಲಾಗಿ ಆರ್‌ಸಿಬಿ ಸಯಾಲಿ ಸತ್‌ಘರೆ ಅವರನ್ನು ಹಾಗೂ ದೆಹಲಿ ಕ್ಯಾಪಿಟಲ್ಸ್ ಸದರ್ಲ್ಯಾಂಡ್ ಬದಲಿಗೆ ಅಲಾನಾ ಕಿಂಗ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಇನ್ನು 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಪಂದ್ಯಗಳು ಜನವರಿ 18ರಿಂದ ಫೆಬ್ರವರಿ 1ರವರೆಗೆ ನೇಪಾಳದಲ್ಲಿ ನಡೆಯಲಿದ್ದು, ಯುಎಸ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಕಾರಣ ತಾರಾ ನರ್ರಿಸ್ WPLನಲ್ಲಿ ಭಾಗವಹಿಸುವುದಿಲ್ಲ. ಅವರ ಸ್ಥಾನಕ್ಕೆ ಯುಪಿ ವಾರಿಯರ್ಸ್ ತಂಡವು ಆಸ್ಟ್ರೇಲಿಯಾದ ಆಲ್‌ರೌಂಡರ್ ಚಾರ್ಲಿ ನಾಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.



