HomeIndia Newsಕರ್ನಾಟಕದ ಬರ ಪರಿಶೀಲನೆಗೆ ಅ.3ರಿಂದ ಕೇಂದ್ರ ತಂಡ ಎಂಟ್ರಿ; 13 ಜಿಲ್ಲೆಗಳಲ್ಲಿ ಬೆಳೆ ಹಾನಿ ಪರಿಶೀಲನೆ

ಕರ್ನಾಟಕದ ಬರ ಪರಿಶೀಲನೆಗೆ ಅ.3ರಿಂದ ಕೇಂದ್ರ ತಂಡ ಎಂಟ್ರಿ; 13 ಜಿಲ್ಲೆಗಳಲ್ಲಿ ಬೆಳೆ ಹಾನಿ ಪರಿಶೀಲನೆ

For Dai;y Updates Join Our whatsapp Group

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ 10 ಸದಸ್ಯರ ತಂಡ ರಾಜ್ಯಕ್ಕೆ ಆಗಮಿಸಲಿದೆ.

ಅಕ್ಟೋಬರ್ 3ರಿಂದ 6ರವರೆಗೆ ಕೇಂದ್ರ ತಂಡ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದೆ. ಬರದಿಂದ ರೈತರಿಗೆ ಉಂಟಾಗಿರುವ ನಷ್ಟ, ಯಾವ ಪ್ರದೇಶಗಳಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ ಹಾಗೂ ಕುಡಿಯುವ ನೀರು ಸೇರಿದಂತೆ ನೀರಿನ ಲಭ್ಯತೆ ಹೇಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಲಿದ್ದಾರೆ.

ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಆಹಾರ ವಿತರಣೆ ಹಾಗೂ ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕೇಂದ್ರ ತಂಡದಲ್ಲಿದ್ದಾರೆ. ಜಿಲ್ಲೆಗಳ ಪ್ರವಾಸದ ವೇಳೆ ಸ್ಥಳೀಯ ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿ ಬರ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಮೂರು ತಂಡಗಳಾಗಿ ಪರಿಶೀಲನೆ:

ಕೇಂದ್ರ ಸರ್ಕಾರದ ತಂಡವನ್ನು ಮೂರು ತಂಡಗಳಾಗಿ ವಿಂಗಡಿಸಲಾಗಿದೆ. ಮೊದಲ ತಂಡ ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 5,51,994 ಹೆಕ್ಟೇರ್ ಬೆಳೆ ಹಾನಿಯಾಗಿರುವುದಾಗಿ ವರದಿಯಾಗಿದೆ.

ಎರಡನೇ ತಂಡ ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ. ಈ ಜಿಲ್ಲೆಗಳಲ್ಲಿ 4,41,290 ಹೆಕ್ಟೇರ್ ಬೆಳೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟದ ಮಾಹಿತಿ ಪಡೆಯಲು ಮಂಡ್ಯ ಜಿಲ್ಲೆಯನ್ನು ಕೂಡ ತಂಡದ ವ್ಯಾಪ್ತಿಗೆ ಸೇರಿಸುವ ಸಾಧ್ಯತೆಯಿದೆ.

ಮೂರನೇ ತಂಡ ಯಾದಗಿರಿ, ರಾಯಚೂರು, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ತೆರಳಲಿದೆ. ಈ ನಾಲ್ಕು ಜಿಲ್ಲೆಗಳಲ್ಲಿ 4,50,095 ಹೆಕ್ಟೇರ್ ಬೆಳೆ ಹಾನಿಯಾಗಿರುವುದಾಗಿ ವರದಿಯಾಗಿದೆ.

ಜಿಲ್ಲೆಗಳ ಪ್ರವಾಸದ ಬಳಿಕ ಅಥವಾ ಪ್ರವಾಸದ ಭಾಗವಾಗಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಆಯೋಜಿಸುವ ಸಭೆಯಲ್ಲೂ ಕೇಂದ್ರ ತಂಡ ಭಾಗವಹಿಸಲಿದೆ. ಈ ವೇಳೆ ಬರ ಪರಿಸ್ಥಿತಿ, ಬೆಳೆ ನಷ್ಟ ಹಾಗೂ ನೀರಿನ ಲಭ್ಯತೆ ಕುರಿತು ರಾಜ್ಯದ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img