ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಬುಧವಾರ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಸೀಟು ಖಾತರಿ ಚೀಟಿಯನ್ನು ಡೌನ್ಲೋಡ್ ಮಾಡಿಕೊಂಡು, ಸೆಪ್ಟೆಂಬರ್ 21ರೊಳಗೆ ಸಂಬಂಧಪಟ್ಟ ಕಾಲೇಜಿಗೆ ತೆರಳಿ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 12,010 ವೈದ್ಯಕೀಯ ಸೀಟುಗಳ ಪೈಕಿ 11,551 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಇನ್ನೂ 459 ವೈದ್ಯಕೀಯ ಸೀಟುಗಳು ಉಳಿದಿವೆ.
ಇನ್ನು ದಂತ ವೈದ್ಯಕೀಯ ಕೋರ್ಸ್ನ ಒಟ್ಟು 2,689 ಸೀಟುಗಳೂ ಈ ಸುತ್ತಿನಲ್ಲಿ ಸಂಪೂರ್ಣವಾಗಿ ಹಂಚಿಕೆಯಾಗಿವೆ ಎಂದು ಕೆಇಎ ತಿಳಿಸಿದೆ.



