ಬೆಂಗಳೂರು: ಬಿಕ್ಲು ಶಿವ ಅಲಿಯಾಸ್ ಶ್ರೀನಿವಾಸ ಕೊಲೆ ಪ್ರಕರಣದಲ್ಲಿ A5 ಆರೋಪಿ ಆಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇಂದು ಭಾರತೀನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಕೊಲೆ ಪ್ರಕರಣದಲ್ಲಿ ಶಾಸಕರ ಹೆಸರು ಕೇಳಿ ಬಂದ ಹಿನ್ನೆಲೆ ಅವರು ಹೈಕೋರ್ಟ್’ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು.
ಇದೇ ಕಾರಣದಿಂದ ಶಾಸಕರು ಭಾರತೀನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಭಾರತಿನಗರ ಪೊಲೀಸ್ ಠಾಣಾ ಮುಂಭಾಗ ಪೊಲೀಸ್ ಬಿಗಿ ಭದ್ರತೆಯಿದೆ.



