HomeKarnataka Newsಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: “ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಈ ವಿಚಾರವಾಗಿ ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ” ಎಂದು ತಿಳಿಸಿದರು.

ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ.

ಈ ವಿಚಾರವಾಗಿ ನಾವು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು. ಗೃಹಸಚಿವ ಪರಮೇಶ್ವರ್ ಅವರು ಎಬಿವಿಪಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!