ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕ ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.
ಬೆಂಕಿಗೆ ಆಹುತಿಯಾದ ಬೋಟ್ ಆಯುಬ್ ಸಾಬ್ ಅವರಿಗೆ ಸೇರಿದ್ದಾಗಿದೆ. ಬಂದರಿನಲ್ಲಿ ಬೋಟ್ ನಿಲ್ಲಿಸಿ ನಿರ್ವಹಣಾ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಬೋಟ್‌ನ ಬಹುತೇಕ ಭಾಗವನ್ನು ಆವರಿಸಿತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ, ಅಷ್ಟರಲ್ಲಾಗಲೇ ಬೋಟ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಅಗ್ನಿ ಅವಘಡದಲ್ಲಿ ಬೋಟ್‌ನಲ್ಲಿದ್ದ ಮೀನುಗಾರಿಕಾ ಬಲೆಗಳು, ಇಂಜಿನ್ ಸೇರಿದಂತೆ ವಿವಿಧ ಉಪಕರಣಗಳು ಸಂಪೂರ್ಣ ಸುಟ್ಟುಹೋಗಿದ್ದು, ಸುಮಾರು ₹30 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



