ತುಮಕೂರು:- ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟ ಒಂದರಲ್ಲಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜರುಗಿದೆ.
32 ವರ್ಷದ ಮನ್ಸೂರ್ ಕೊಲೆಯಾದ ವ್ಯಕ್ತಿ. ಇವರು ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಇದೀಗ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟುಕೊಂಡಿದೆ.
ಗುಜುರಿ ಕೆಲಸ ಮಾಡುತ್ತಿದ್ದ ಮನ್ಸೂರ್, ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದು, ಹೊಸ ಜೀವನ ಆರಂಭಿಸಿದ್ದರು. ನಿನ್ನೆ ಬೆಳಿಗ್ಗೆ ತನ್ನದೇ ಆಟೋದಲ್ಲಿ ಮನೆಯಿಂದ ಹೋದವರು ಬಳಿಕ ನಾಪತ್ತೆ ಆಗಿದ್ದಾರೆ. ಕುಟುಂಬಸ್ಥರು ಹಲವು ಬಾರಿ ಕರೆ ಮಾಡಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಹೀಗಾಗಿ ತಿಪಟೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಆಟೋ ಹುಡುಕಾಡಿದಾಗ ಚಿಕ್ಕಕೊಟ್ಟಗಿಹಳ್ಳಿ ಬಳಿ ಪತ್ತೆ ಆಗಿದೆ. ಬಳಿಕ ಸುತ್ತಮುತ್ತ ಹುಡುಕಾಟ ಮಾಡಿದ ವೇಳೆ ಅಡಿಕೆ ತೋಟ ಒಂದರಲ್ಲಿ ಮನ್ಸೂರ್ ಶವ ಪತ್ತೆ ಆಗಿದೆ.
ಘಟನೆ ಸಂಬಂಧ ಸದ್ಯ ತಿಪಟೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ.



