HomeGadag Newsಬಂಜಾರ ಸಮುದಾಯದಿಂದ ಪೊರಕೆ ಚಳುವಳಿ

ಬಂಜಾರ ಸಮುದಾಯದಿಂದ ಪೊರಕೆ ಚಳುವಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ, ನಗರದ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಮತ್ತು ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಶುಕ್ರವಾರವೂ ಮುಂದುವರೆಯಿತು.

ಈ ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ನೂರಾರು ಜನರು ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಶುಕ್ರವಾರ ಗದಗ ಜಿಲ್ಲೆಯ 72 ತಾಂಡಾಗಳ ಪೈಕಿ ಗದಗ ತಾಲೂಕಿನ ಬೆಳದಳ್ಳಿ, ಮುಂಡರಗಿ ತಾಲೂಕಿನ ಬಿಡನಾಳ, ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ, ಲಕ್ಷ್ಮೇಶ್ವರ ತಾಲೂಕಿನ ಉಂಡೆನಹಳ್ಳಿ, ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ತಾಂಡಾಗಳ ಬಂಜಾರರು ಬೆಳಿಗ್ಗೆ 11 ಗಂಟೆಗೆ ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ `ಪೊರಕೆ ಚಳುವಳಿ’ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ಕಾಡು-ಬೆಟ್ಟಗಳಲ್ಲಿ ದೊರೆಯುವ ಬಂಧರಕಿ ಮತ್ತು ಕಸಬರಗಿ ಸಸಿಗಳನ್ನು ಕೈಯಲ್ಲಿ ಹಿಡಿದು, ರಸ್ತೆಯುದ್ದಕ್ಕೂ ಸ್ವಚ್ಛತೆ ನಡೆಸುತ್ತಾ ಪೊರಕೆ ಚಳುವಳಿ ಮುಖಾಂತರ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕೆಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರವಿಕಾಂತ್ ಅಂಗಡಿ, ಕೆ.ಸಿ. ನಭಾಪುರ, ಪರಮೇಶ ನಾಯಕ್, ಚಂದು ನಾಯಕ್, ಧನಸಿಂಗ್ ನಾಯಕ್, ಈಶ್ವರ್ ನಾಯಕ್, ಐ.ಎಸ್. ಪೂಜಾರ್, ಟಿ.ಡಿ. ಪೂಜಾರ್, ವಿಠಲ್ ತೋಟದ, ಮನೋಜ್ ಕಾರ್ಬಾರಿ, ಕುಬೇರಪ್ಪ ಪವಾರ್, ಚಂದಪ್ಪ ಮಾನಪ್ಪ ಕಾರ್ಬಾರಿ, ನಾರಾಯಣ ವರ್ಜನಪ್ಪ ಪೂಜಾರ್, ಥಾವರಪ್ಪ ಪಕೀರಪ್ಪ ಪೂಜಾರ್, ಟಿಕಪ್ಪ ಧನಂಜಪ್ಪ ನಾಯಕ್, ಕೇಶಪ್ಪ ಛತ್ರಪ್ಪ ಕಾರ್ಬಾರಿ, ದೇವಪ್ಪ ರಾಮಪ್ಪ ರಾಠೋಡ್, ಈರಣ್ಣ ಚೌಹಾಣ್, ಕೃಷ್ಣಪ್ಪ ಪೂಜಾರ್, ಲಾಲಪ್ಪ ಪೂಜಾರ್, ಚಂದಪ್ಪ ನಾಯಕ್, ಮಂಜುನಾಥ ಕಾರಭಾರಿ, ಕುಮಾರ್ ಡಾವ್, ಸಂತೋಷ ಲಮಾಣಿ, ಕೃಷ್ಣ ಲಮಾಣಿ, ಶಿವಪ್ಪ ನಾಯಕ್, ಗಿರೀಶ ಕಟ್ಟಿಮಣಿ, ಕುಬೇರ್ ಪವಾರ್, ಭೀಮಸಿಂಗ್ ರಾಠೋಡ್, ಗಿರೀಶ ಕಾರಭಾರಿ, ಸಂತೋಷ ಪವಾರ್ ಮುಂತಾದವರು ಭಾಗವಹಿಸಿದ್ದರು.

ಶನಿವಾರ ಕಬಲಾಯತ್ ಕಟ್ಟಿ, ಹಮ್ಮಿಗಿ, ಮಜ್ಜೂರ, ಅಕ್ಕಿಗುಂದ, ಉಳ್ಳಟ್ಟಿ, ಬೆಣಸಮಟ್ಟಿ ತಾಂಡಾಗಳ ಬಂಜಾರ ಸಮುದಾಯದವರು ಬೆಳಿಗ್ಗೆ 11 ಗಂಟೆಗೆ ಗದಗ ನಗರದ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ `ತಮಟೆ ಚಳುವಳಿ’ ನಡೆಸಿ, ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಕೀಲರು ಹಾಗೂ ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಾಂತ್ ಅಂಗಡಿ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!