ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ‘ಬುರುಡೆ ಗ್ಯಾಂಗ್’ನ ಅಚ್ಚರಿಯ ನಡೆ ಭಾರೀ ಸಂಚಲನ ಸೃಷ್ಟಿಸಿದೆ. ಹೌದು ತಾವೇ ಕೊಟ್ಟ ಮೂಲ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಸುಮಾರು 100 ಗಂಟೆಗೂ ಹೆಚ್ಚಿನ ಕಾಲ ನಮ್ಮನ್ನು ವಿಚಾರಣೆ ಮಾಡಿದ್ದಾರೆ. ದೂರಿಗೆ ಸಂಬಂಧಿಸಿದಂತೆ 164 ಹೇಳಿಕೆಗಳಲ್ಲಿ ತಮ್ಮ ವಿರುದ್ಧ ಆರೋಪಗಳಿಲ್ಲ. ಆದರೂ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್ ನೀಡಿದ್ದ ದೂರನ್ನು ವಜಾಗೊಳಿಸಿ ಎಂದು ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಮನವಿ ಮಾಡಿದೆ. ಇವರು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್ಐಟಿ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಎಲ್ಲಾ ಹೇಳಿಕೆಯಲ್ಲಿ ಎಸ್‌ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಇದೇ ಬುರುಡೆ ಗ್ಯಾಂಗ್ ಇದೀಗ ಎಫ್ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.
ಚಿನ್ನಯ್ಯ ದೂರಿನ ನಂತರ ಎಸ್‌ಐಟಿ ಎಫ್‌ಐಆರ್‌ನಲ್ಲಿ ಹೆಚ್ಚುವರಿ ಸೆಕ್ಷನ್ಸ್ ಸೇರಿಸಿತ್ತು. ಬಿಎನ್‌ಎಸ್ ಸೆಕ್ಷನ್ 336 (ನಕಲಿ ದಾಖಲೆ), ಎಲೆಕ್ಟಾçನಿಕ್ ದಾಖಲೆ ವಂಚನೆ ಉದ್ದೇಶಕ್ಕೆ ಬಳಕೆ, 211(ಎ) (ಉದ್ದೇಶ ಪೂರ್ವಕ ಮಾಹಿತಿ ನೀಡಲು ವಿಫಲ, 230 (ಸುಳ್ಳು ಸಾಕ್ಷö್ಯ ಸೃಷ್ಟಿ)229 (ಉದ್ದೇಶ ಪೂರ್ವಕ ಸುಳ್ಳು ಸಾಕ್ಷ್ಯ ಸೃಷ್ಟಿ, 227 (ಉದ್ದೇ ಪೂರ್ವಕ ಸುಳ್ಳು ಹೇಳಿಕೆ), 248 (ಸುಳ್ಳು ಕ್ರಿಮಿನಲ್ ಮೊಕದ್ದಮೆ) ಸೆಕ್ಷನ್‌ಗಳನ್ನು ಸೇರಿಸಲಾಗಿತ್ತು. ಆ ಬಳಿಕ ದೂರುದಾರ ಚಿನ್ನಯ್ಯನ ಬಂಧನವಾಗಿತ್ತು.
ಅಕ್ಟೋಬರ್ 24 ರಂದು ವಿಚಾರಣೆಗೆ ಬರುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಈ ವಿಚಾರಣೆಗೆ ಹಾಜರಾದಲ್ಲಿ ಬಂಧನ ಸಾಧ್ಯತೆ ಭಯದಿಂದ ಇದೀಗ ಬುರುಡೆ ಗ್ಯಾಂಗ್ ಪ್ರಕರಣವನ್ನೇ ರದ್ದು ಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ.



