HomeKarnataka NewsCabinet Expansion Row: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಸ್ತೆಗಿಳಿದ ಸುಬ್ಬಾರೆಡ್ಡಿ ಬೆಂಬಲಿಗರು!

Cabinet Expansion Row: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಸ್ತೆಗಿಳಿದ ಸುಬ್ಬಾರೆಡ್ಡಿ ಬೆಂಬಲಿಗರು!

For Dai;y Updates Join Our whatsapp Group

ಚಿಕ್ಕಬಳ್ಳಾಪುರ: ಸಚಿವ ಸಂಪುಟ ವಿಸ್ತರಣೆ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮೂರು ಬಾರಿ ಶಾಸಕರಾಗಿರುವ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಸುಬ್ಬಾರೆಡ್ಡಿ ಬೆಂಬಲಿಗರು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರು ರಸ್ತೆ ಮಧ್ಯೆ ಬಸ್‌ಗಳನ್ನು ನಿಲ್ಲಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಲವು ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿರುವ ಹಾಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಬೆಂಬಲಿಗರು ಆಗ್ರಹಿಸಿದ್ದಾರೆ.

ತಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಚಿವ ಸ್ಥಾನ ವಂಚಿತರ ಬೆಂಬಲಿಗರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದು, ಚಿಕ್ಕಬಳ್ಳಾಪುರದಲ್ಲೂ ಪ್ರತಿಭಟನೆ ತೀವ್ರಗೊಂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img