ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ನೀಡುವ 2025ನೇ ಸಾಲಿನ ರಾಜ್ಯಮಟ್ಟದ ‘ಸಂಗಮಸಿರಿ ಪ್ರಶಸ್ತಿ’ಯನ್ನು ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ನೀಡಲು ನಿರ್ಧರಿಸಲಾಗಿದೆ.
ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ತಮ್ಮ ಮಾಹಿತಿಯನ್ನು ಹಾಗೂ ಸಾಹಿತ್ಯದ ವಿವರಗಳನ್ನು ಅಕ್ಟೋಬರ್ 15ರೊಳಗೆ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ, ಮನೆ ನಂ. 338, ಬಸವ ಬನಸಿರಿ, ಗೋಕುಲ ರಸ್ತೆ, ಹುಬ್ಬಳ್ಳಿ – 580030 ಈ ವಿಳಾಸಕ್ಕೆ ಕಳಿಸಲು ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ, ಸಂಯೋಜಕ ಡಾ. ಪ್ರಭು ಗಂಜಿಹಾಳ ತಿಳಿಸಿದ್ದಾರೆ.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9060933596, 9986476733 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



