HomeUncategorizedಕಾಲ್ತುಳಿತ ದುರಂತದ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ಅಸ್ತ್ರ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!

ಕಾಲ್ತುಳಿತ ದುರಂತದ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ಅಸ್ತ್ರ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!

For Dai;y Updates Join Our whatsapp Group

Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಜನರ ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ಜಾತಿಗಣತಿ ಅಸ್ತ್ರ ಬಳಸುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಸಾವಿಗೆ ಸಂಬಂಧಿಸಿದಂತೆ ಎಐಸಿಸಿ ಸಿಎಂ, ಡಿಸಿಎಂ ಅವರ ತಲೆದಂಡ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ಜಾತಿಗಣತಿ ಅಡ್ಡ ಇಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್‌ಸಿಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯ ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಪ್ಲ್ಯಾನ್‌ ಮಾಡಿತ್ತು. ಬಳಿಕ ಸಂಭ್ರಮ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾಯಿತು.

ಇದೀಗ ಈ ಘಟನೆ ಇಡೀ ದೇಶದಲ್ಲಿ ಸುದ್ದಿಯಾಗಿದೆ. ನೂರಾರು ಜನರು ಗಾಯಗೊಂಡ ಈ ದುರ್ಘಟನೆಯ ಬಗ್ಗೆ ಬಿಜೆಪಿ, ದುರಂತವನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದೆ. ಈ ಹಿನ್ನೆಲೆ ಎಐಸಿಸಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದರು. ಇವರು ಮಾಡಿದ ಅಪರಾಧಕ್ಕೆ ಇವರಿಬ್ಬರ ತಲೆದಂಡವಾಗುತ್ತದೆ ಎಂದುಕೊಂಡಿದ್ದೆವು. ಅವರು ಜಾತಿಗಣತಿಯನ್ನು ಮುಂದಿಟ್ಟು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕಾರಣಕ್ಕೂ ಇವರ ವಿರುದ್ಧ ಹೋರಾಟ ನಿಲ್ಲಿಸುವುದಿಲ್ಲ, ಇವರಿಬ್ಬರೂ ಘಟನೆಯ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!