Homecultureಸಂಭ್ರಮದ ಈದ್ ಮಿಲಾದ್ ಆಚರಣೆ

ಸಂಭ್ರಮದ ಈದ್ ಮಿಲಾದ್ ಆಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಪ್ರವಾದಿ ಮುಹಮ್ಮದ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಸೋಮವಾರ ಈದ್ ಮಿಲಾದ್ ಹಬ್ಬವನ್ನು ಪಟ್ಟಣವೂ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ಸ್ಥಳಗಳಲ್ಲಿಯ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯ ಕೋರಿದರು. ಆಸಾರ ಓಣಿ, ಮಕಾನಗಲ್ಲಿ, ತಳಗೇರಿ ಓಣಿ, ಮೇಗೇರಿ ಓಣಿ, ಇಂಗಲಾಪೂರ ಇತ್ಯಾದಿ ಪ್ರದೇಶಗಳು ಹಸಿರು ಬಾವುಟ, ತೋರಣಗಳಿಂದ ಶೃಂಗರಿಸಲ್ಪಟ್ಟಿದ್ದವು. ಪ್ರಮುಖ ವೃತಗಳಲ್ಲಿ ಹಬ್ಬಕ್ಕೆ ಶುಭಾಶಯ ಕೋರುವ ಬ್ಯಾನರಗಳು ರಾರಾಜಿಸುತ್ತಿದ್ದವು.

ನಂತರ ಹಜರತ್ ಹಬೂಬ ಸುಬ್ಹಾನಿ ದರ್ಗಾದಿಂದ ಮೆರವಣಿಗೆಯು ಪ್ರಾರಂಭವಾಗಿ ಪ್ರಮುಖ ವೃತ್ತಗಳಲ್ಲಿ ಸಂಚರಿಸಿತು. ಸಮಾಜದ ಹಿರಿಯರು, ಯುವಕರು, ಚಿಕ್ಕ ಮಕ್ಕಳು ಸೇರಿದಂತೆ ಸಾವಿರಾರು ಜನರು ಅತ್ಯಂತ ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img