ಚಿತ್ರದುರ್ಗ: ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕೇಂದ್ರದ ಇಂತಹ ಮಲತಾಯಿ ಧೋರಣೆಗೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸುಳ್ಳು ಪ್ರಚಾರ ಮಾಡಿಕೊಂಡು ಬಂದಿದೆ.
ಹತ್ತು ವರ್ಷಹಳಿಂದ ಬಿಜೆಪಿಯಿಂದ ಸುಳ್ಳು ಹೇಳಿಯೇ ಅಧಿಕಾರ ನಡೆಸಿದೆ. ಜನರನ್ನು ಮರುಳು ಮಾಡಿ ಮೂರನೇ ಬಾರಿಗೆ ಅಧಿಕಾರಕ್ಕೂ ಬಂದಿದೆ. ಮಾಡಲು ಕೆಲಸ ಇಲ್ಲದ್ದಕ್ಕೆ ಬಿಜೆಪಿಯಿಂದ ಮೈಸೂರು ಪಾದಾಯತ್ರೆ ಮಾಡುತ್ತಿದ್ದಾರೆ ಮುಡಾ ಹಗರಣ, ವಾಲ್ಮೀಕಿ ಹಗರಣ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಹೀಗಿರುವಾಗ ಯಾವ ಕಾರಣಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಬೇಕು? ಎಂದು ಪ್ರಶ್ನಿಸಿದರು.



